ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್‌ಎಲ್ ಮತ್ತು ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಒಟ್ಟು 5 ಲಕ್ಷ ರೂ. ಸಾಲ ಪಡೆದಿದ್ದು, ಮನೆ ನಿರ್ಮಾಣ, ಕೃಷಿ ಮತ್ತು ಹಸು ಸಾಕಾಣಿಕೆಗಾಗಿ ಈ ಹಣವನ್ನು ಬಳಸಿದ್ದಾರೆ. ಆದರೆ, ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಪಾವತಿಸಬೇಕಾದ ಹೊಣೆಗಾರಿಕೆಯಿಂದ ಅವರು ಸಂಕಷ್ಟಕ್ಕೆ ಸಿಲುಕಿದರು.
ಸಾಲದಲ್ಲಿ ಪಡೆದುಕೊಂಡಿದ್ದ ಹಸು ಸಹ ಇತ್ತೀಚೆಗೆ ಸಾವನ್ನಪ್ಪಿದ್ದು, ಜೀವನ ನಿರ್ವಹಣೆ ಹೆಚ್ಚು ಕಷ್ಟಸಾಧ್ಯವಾಯಿತು. ಈ ಪರಿಸ್ಥಿತಿಯಿಂದ ಹೊರಬರಲು ಸಾಧ್ಯವಾಗದೆ, ಸಮೀಪದ ಹುಲ್ಲಹಳ್ಳಿ ಗ್ರಾಮದ ಅಂಗಡಿಯಿಂದ ವಿಷದ ಮಾತ್ರೆಗಳನ್ನು ಖರೀದಿಸಿ, ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಇದನ್ನು ಓದಿ –ಮೈಸೂರಿನಲ್ಲಿ ಥೈಲ್ಯಾಂಡ್ ಯುವತಿಯರ ಬಳಸಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆ
ಈ ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಯುತ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆ ನಂತರವೇ ತಿಳಿದುಬರುವ ನಿರೀಕ್ಷೆಯಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು