ಗಂಡ ಹೋಟೆಲ್‍ಗೆ ಊಟಕ್ಕೆ ಕರೆದುಕೊಂಡು ಹೋಗಿಲ್ಲ ಎಂದು ಇಬ್ಬರು ಮಕ್ಕಳೊಂದಿಗೆ ಮಹಿಳೆ ಪೆಟ್ರೋಲ್ ಸರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಂ ಗೊಲ್ಲಹಳ್ಳಿಯಲ್ಲಿ ನಡೆದಿದೆ.
ಸಂಧ್ಯಾ (24), ಕುಸುಮ (4) ಹಾಗೂ 1 ವರ್ಷ 7 ತಿಂಗಳಿನ ಮಗು ರೋಹಿತ್ ಮೃತರು. ಮನೆಯಲ್ಲಿ ಅತ್ತೆ ಮಾವ ಗಂಡ ಯಾರೂ ಇಲ್ಲದ ವೇಳೆ ಸಂಧ್ಯಾ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು.
ಇದನ್ನು ಕಂಡ ಗ್ರಾಮಸ್ಥರು ಬಾಗಿಲು ಒಡೆದು ಮೂವರನ್ನು ರಕ್ಷಿಸಿಲು ಯತ್ನಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಮೂವರು ಸಹ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಯಲಹಂಕ ಮೂಲದ ಸಂಧ್ಯಾ, ಎಸ್.ಎಂ ಗೊಲ್ಲಹಳ್ಳಿಯ ಶ್ರೀಕಾಂತ್‍ರೊಂದಿಗೆ ಕಳೆದ 5 ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು.
ವಾರಕ್ಕೊಮ್ಮೆ ಆದ್ರೂ ಹೋಟೆಲ್ ಊಟ ಮಾಡುವ ಅಭ್ಯಾಸ ಇದ್ದ ಸಂಧ್ಯಾಗೆ ಗಂಡ ಆಗಾಗ್ಗೆ ಹೋಟೆಲ್‍ಗೆ ಕೆರೆದುಕೊಂಡು ಹೋಗಿ ಊಟ ಮಾಡಿಸಿಕೊಂಡು ಬರುತ್ತಿದ್ದರು.
ಆದರೆ ಇತ್ತೀಚೆಗೆ ಕೆಲಸದ ಒತ್ತಡದ ನಡುವೆ ಆಗಿರಲಿಲ್ಲ ಇದೇ ಕಾರಣಕ್ಕೆ ಜಗಳ ಮಾಡಿದ್ದ ಸಂಧ್ಯಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂಗನವಾಡಿಗೆ ಹೋಗಿದ್ದ ತನ್ನ ಮಗುವನ್ನು ಮನೆಗೆ ಕರೆದುಕೊಂಡು ಬಂದು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಮೃತಳ ತಂದೆ ನಾಗರಾಜು ದೂರು ನೀಡಿದ್ದಾರೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್