December 22, 2024

Newsnap Kannada

The World at your finger tips!

waterspoil

ಕಲುಷಿತ ನೀರು ಸೇವಿಸಿ ವೃದ್ಧೆ ಸಾವು

Spread the love

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಆ.21ರಂದು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಗ್ರಾಮದ 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದ ಚಂದ್ರಮ್ಮ (60) ಸಾವನ್ನಪ್ಪಿರುವ ವೃದ್ಧೆ.

ಚಂದ್ರಮ್ಮ ವಾಂತಿ, ಬೇಧಿ, ಜ್ವರ ಹಾಗೂ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಚಂದ್ರಮ್ಮ ಕೊನೆಯುಸಿರೆಳೆದಿದ್ದಾರೆ.

ಇನ್ನುಳಿದ 6 ಮಂದಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಕುಡಿಯುವ ನೀರಿನ ಪೈಪು ಒಡೆದು ಚರಂಡಿ ನೀರು ಮಿಶ್ರಣವಾದ ಹಿನ್ನೆಲೆ ನೀರು ಕಲುಷಿತಗೊಂಡಿದ್ದು , ಘಟನೆಯ ನಂತರ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!