ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಹುಬ್ಬಳ್ಳಿಯ ಮನೆಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಶ್ರೀದೇವಿ ಕಮ್ಮಾರ ಎಂಬಾಕೆಯೇ ಮೃತ ಮಹಿಳೆ. ತಾನು ವಾಸಿಸುತ್ತಿದ್ದ ಮನೆ ಬಿದ್ದ ಪರಿಣಾಮ ಪರಿಹಾರಕ್ಕೆ ಅಲೆದಾಡಿದ ಮಹಿಳೆ ಮನನೊಂದು ಏಪ್ರಿಲ್ 6ರಂದು ಸಚಿವರ ಹುಬ್ಬಳ್ಳಿ ಮಯೂರಿ ಎಸ್ಟೇಟ್ ನಲ್ಲಿರುವ ಮನೆಯ ಎದುರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದೇ ವೇಳೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾರೆ.
ಮನೆ ನಿರ್ಮಾಣದ ಬಗ್ಗೆ ಸ್ಥಳೀಯ ಶಾಸಕರು, ಅಧಿಕಾರಿಗಳ ಬಳಿ ಅಲೆದಾಡಿ ಬೇಸತ್ತಿದ್ದ ಮಹಿಳೆ ವಿಷ ಸೇವಿಸಿದ್ದರು. ಅಲ್ಲದೇ ತನ್ನ ಸಾವಿನ ಬಗ್ಗೆ ಕೂಡ ಡೆತ್ ನೋಟ್ ಬರೆದಿಟ್ಟು ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯ ನಂತರ ಮಹಿಳೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೇಶವಪುರ ಪೋಲಿಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್