ಮೈಸೂರು: ಜಿಲ್ಲೆಯಲ್ಲಿ ದನ ಮೇಯಿಸಲು ಕಾಡಂಚಿಗೆ ತೆರಳಿದ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ ನಡೆಸಿದ್ದು, ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ಹುಲಿ ದಾಳಿಯಿಂದ ರತ್ನಮ್ಮ(55) ಎಂಬುವರು ಸಾವನ್ನಪ್ಪಿದ್ದಾರೆ. ದನ ಮೇಯಿಸುವುದಕ್ಕೆ ಕಾಡಂಚಿಗೆ ತೆರಳಿದ್ದಾಗ, ಹುಲಿ ದಾಳಿ ಮಾಡಿದೆ. ಇದನ್ನು ಓದು-100 ಕೋಟಿ ಮಹಿಳಾ ಪ್ರಯಾಣಿಕರ ದಾಟಿದ ಶಕ್ತಿ ಯೋಜನೆ !
ಕಾಡಂಚಿನಲ್ಲಿ ದನ ಮೇಯಿಸುತ್ತಿದ ಸಂದರ್ಭದಲ್ಲಿ ಏಕಾಏಕಿ ರತ್ಮಮ್ಮ ಮೇಲೆ ಹುಲಿ ದಾಳಿ ನಡೆಸಿದೆ. ಹುಲಿ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಡಿಯಾಲ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ಸಂಬಂಧ ಜನರು ನರ ರಾಕ್ಷಸ ಹುಲಿಯನ್ನು ಸೆರೆ ಹಿಡಿದು, ಜನರನ್ನು ರಕ್ಷಿಸುವಂತೆ ಆಗ್ರಹಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು