ಲಾಭದ ಆಮಿಷವೊಡ್ಡಿ ಉದ್ಯಮಿಗೆ ಮಹಿಳೆಯೊಬ್ಬಳು 32 ಲಕ್ಷ ರು ಲಕ್ಷಾಂತರ ರು ವಂಚಿಸಿರುವ ಘಟನೆ ಬಗ್ಗೆ ಹುಬ್ಬಳ್ಳಿಯ ಸೈಬರ್ ಕ್ರೈಂ ಬ್ರಾಂಚ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯ ಉದ್ಯಮಿ ಗುರುಮೂರ್ತಿ ಎಂಬವರೇ ಮೋಸ ಹೋದವರು.
ಇವರಿಗೆ ಅಪರಿಚಿತರೊಬ್ಬರು ಪ್ಲಿಪ್‍ಕಾರ್ಟ್ ಕಂಪನಿಯ ಪ್ರಾಜೆಕ್ಟ್‍ನಲ್ಲಿ ಹೂಡಿಕೆ ಮಾಡಿದರೆ ಭರ್ಜರಿ ಲಾಭ ಗಳಿಸಬಹುದು ಎಂದು ನಂಬಿಸಿ ಬರೋಬ್ಬರಿ 32 ಲಕ್ಷ ವಂಚನೆ ಮಾಡಿದ್ದಾರೆ.
ದೂರುದಾರರಿಗೆ ಅಪರಿಚಿತ ಮಹಿಳೆ ಲಕ್ಷ್ಮೀ ಮೆಹರ್ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದಾಳೆ. ಪ್ಲಿಪ್‍ಕಾರ್ಟ್ ಕಂಪನಿಯ ಪ್ರಾಜೆಕ್ಟ್ ನಲ್ಲಿ ಹೂಡಿಕೆ ಮಾಡಿದರೆ ತುಂಬಾ ಲಾಭ ಗಳಿಸಬಹುದು ಎಂದು ಹೇಳಿ ವಿವಿಧ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 32 ಲಕ್ಷ ರೂ.ಗಳನ್ನು ಆನ್‍ಲೈನ್ ಮೂಲಕ ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡು ಮೋಸ ಮಾಡಿದ್ದಾರೆ.
ಪದೇ ಪದೇ ಹಣ ಹಾಕು ಎಂದು ಕೇಳುತ್ತಿದ್ದಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ