ಬ್ಯಾಂಕ್‍ನಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಹಲವು ಮಹಿಳೆಯರಿಂದ ಹಣ ಕಟ್ಟಿಸಿಕೊಂಡ ವಂಚಕಿಯೊಬ್ಬಳು ಸುಮಾರು 70 ಲಕ್ಷ ರು ಹಣದೋಚಿ ರಾತ್ರೋರಾತ್ರಿ ಎಸ್ಕೇಪ್ ಆಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಹೇಮಲತಾ(40)ಎಂಬಾಕೆ ತನ್ನ ನಯವಾದ ಮಾತುಗಳಿಂದಲೇ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಳು. ಸದಾ ದೇವರ ಧ್ಯಾನ, ಧಾರ್ಮಿಕ ಕಾರ್ಯಗಳನ್ನು ನಡೆಸಿ ತಾನು ಪ್ರಾಮಾಣಿಕ ಮಹಿಳೆ ಎಂದು ಬಿಂಬಿಸಿ ಕೊಂಡಿದ್ದಳು.
ಮೊದಲಿಗೆ ಚೀಟಿ ಆರಂಭಿಸಿದ ಆಕೆ, ಸಾಕಷ್ಟು ಮಹಿಳೆಯರಿಂದ ಹಣ ಕಟ್ಟಿಸಿಕೊಂಡು ಕಾಲಕ್ಕೆ ಸರಿಯಾಗಿ ಚೀಟಿ ಹಣ ಪಾವತಿಸಿ ನಂಬಿಕೆ ಸಂಪಾದಿಸಿದ್ದಳು.
ನಗರದ ಸಾತಗಳ್ಳಿ ಒಂದನೇ ಹಂತದ ಬಡಾವಣೆಯಲ್ಲಿ ಒಂದು ವರ್ಷದ ಹಿಂದೆ ಬಾಡಿಗೆ ಮನೆಗೆ ಬಂದಿದ್ದ ಹೇಮಲತಾ ಸುಮಾರು 20 ಮಹಿಳೆಯರನ್ನು ವಂಚಿಸಿ ಹಣ ಪಡೆದು ಪರಾರಿಯಾಗಿದ್ದಾಳೆ.
ವಿವಿಧ ಬ್ಯಾಂಕ್ ಗಳಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಗಳಿಗೆ ಕಮೀಷನ್ ಕೊಡಬೇಕು ಎಂದು ಹೇಳಿ ಹಣ ಪಡೆದಿದ್ದಳು.
ಗಂಡ ಹಾಗೂ ಕುಟುಂಬಸ್ಥರಿಗೆ ತಿಳಿಸದೇ ಮಹಿಳೆಯರು ಹಣ ಕೊಟ್ಟಿದ್ದಾರೆ. ಹೆಚ್ಚಿನ ಬಡ್ಡಿ ಕೊಡಿಸುವುದಾಗಿ ನಂಬಿಸಿ ಮಹಿಳೆಯರಿಂದ ಲಕ್ಷಾಂತರ ರೂ. ಪಡೆದಿದ್ದಾಳೆ. ನಂತರ ಸುಮಾರು 70 ಲಕ್ಷ ರು. ಸಂಗ್ರಹವಾಗುತ್ತಿದ್ದಂತೆ ಮೂರು ದಿನಗಳ ಹಿಂದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿಕೊಂಡು ಪರಾರಿಯಾಗಿದ್ದಾಳೆ.
ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ