ಲಾಳನಕೆರೆಯಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕಮಹಿಳೆ ಬಲಿ: ಭಯ ಭೀತರಾದ ಗ್ರಾಮಸ್ಥರು

Team Newsnap
1 Min Read

ಶ್ರೀರಂಗಪಟ್ಟಣ :
ಆನೆಗಳ ಹಿಂಡು ದಾಳಿ ಮಾಡಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ಭಾನುವಾರ ಜರುಗಿದೆ

ಸಾಕಮ್ಮ ಲೇ. ಸಿದ್ದಪ್ಪ.(50) ಮೃತ ಕಾರ್ಮಿಕ ಮಹಿಳೆ.

ಭಾನುವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದಾಗ ಸಲಗ ದಾಳಿ ಮಾಡಿದೆ.

ಸಾಕಮ್ಮ ಪೀಹಳ್ಳಿ ಗ್ರಾಮದ ಮಾಲೀಕ ರೋಬ್ಬರ ಜಮೀನಿಗೆ ಕೂಲಿ ಕೆಲಸಕ್ಕಾಗಿ ತೆರಳಿದ್ದರು ಇವರ ಜೊತೆ ಎಂಟಕ್ಕೂ ಹೆಚ್ಚು ಮಂದಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು

ಆನೆ ಪ್ರತ್ಯಕ್ಷವಾಗಿರುವ ಬಗ್ಗೆ ಯಾವುದೇ ಸುಳಿವು ಇಲ್ಲದ ಹಿನ್ನೆಲೆಯಲ್ಲಿ ಭಯ ಇಲ್ಲದೆ ಕೆಲಸ ಮಾಡುತ್ತಿದ್ದರು

ಕಬ್ಬಿನ ಗದ್ದೆಯಲ್ಲಿ ಬಿಡು ಬಿಟ್ಟಿದ್ದ ಆನೆಗಳ ಹಿಂಡಿನಲ್ಲಿದ್ದ ಸಲಗ ಈ ವೇಳೆ ಮಹಿಳೆಯರ ಮೇಲೆ ಏಕಾಏಕಿ ದಾಳಿ ಮಾಡಿದೆ. ತಪ್ಪಿಸಿಕೊಳ್ಳಲು ಸಾಕಮ್ಮ ಪ್ರಯತ್ನ ಮಾಡಿದರಾದರೂ ಅಷ್ಟರಲ್ಲಿ ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಇತರ ಕಾರ್ಮಿಕರು ಪಾರಾಗಿದ್ದಾರೆ,

ಅರಣ್ಯ ಇಲಾಖೆ ಸಿಬ್ಬಂದಿ ಆನೆ ಗಳ ಮೇಲೆ ಕಲ್ಲು ತೂರದಂತೆ ಮತ್ತು ಅವುಗಳ ಸಮೀಪ ಹೋಗದಂತೆ ಮನವಿ ಮಾಡಿದರೂ ರೊಚ್ಚಿಗೆದ್ದ ಜನತೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಾಂತರ ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.

Share This Article
Leave a comment