ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಮಹಿಳಾ ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳ ವಿರುದ್ಧ ಅಮಾತ್ತಿನ ಕ್ರಮ ಕೈಗೊಳ್ಳಲಾಗಿದೆ.
ಉತ್ತರ ಪ್ರದೇಶದಿಂದ ಆಗ್ರಾಕ್ಕೆ ಹೋಗುವಾಗ ಲಕ್ನೋಹೊರವಲಯದಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಮಹಿಳಾ ಕಾನ್ಸ್‌ಸ್ಟೇಬಲ್ ಗುಂಪೊಂದು ಸೆಲ್ಫಿ ಕ್ಲಿಕ್ಕಿಸಿಕೊಂಡಿದೆ.
ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದಾಗ್ಯೂ ಈ ವಿಚಾರ ಕಾನ್ಸ್‌ಸ್ಟೇಬಲ್‍ಗಳಿಗೆ ಖುಷಿಯಾದ ವಿಚಾರವಾಗಿ ಪರಿಣಮಿಸದೇ ಸಮಸ್ಯೆಯಾಗಿ ಎದುರಾಗಿದೆ.
ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಫೋಟೋಗೆ ಪೋಸ್ ನೀಡಿದ ಮಹಿಳಾ ಕಾನ್ಸ್‌ಸ್ಟೇಬಲ್‌ಗಳು ಕ್ರಮ ಎದುರಿಸಬೇಕಾಗುತ್ತದೆ ಎಂದು ಲಕ್ನೋ ಪೊಲೀಸ್ ಆಯುಕ್ತ ಡಿ.ಕೆ. ಠಾಕೂರ್ ತಿಳಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನನ್ನ ಜೊತೆ ಫೋಟೋ ತೆಗೆದುಕೊಳ್ಳುವುದು ಅಪರಾಧ ಆಗಿದ್ದರೆ, ನನಗೆ ಶಿಕ್ಷೆ ನೀಡಬೇಕು, ಆದರೆ ಮಹಿಳಾ ಕಾನ್ಸ್‌ಸ್ಟೇಬಲ್‌ಗಳನ್ನು ದೂಷಿಸುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು