December 23, 2024

Newsnap Kannada

The World at your finger tips!

sudha police

ಕುಜ ದೋಷವೇ ಮದುವೆಗೆ ಅಡ್ಡಿ – ಮಹಿಳಾ ಪೊಲೀಸ್ ಆತ್ಮಹತ್ಯೆ

Spread the love

ಮದುವೆಗೆ ಕುಜ ದೋಷ ಅಡ್ಡಿಯಾದ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್ ಪೇದೆಯಾದ ಸುಧಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ಜರುಗಿದೆ.

ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ 6 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು.ಹಾಗೂ ಹೆತ್ತವರ ವಿರೋಧ ನಡುವೆಯೂ ಇಬ್ಬರು ಮದುವೆಗೆ ಸಿದ್ಧರಾಗಿದ್ದರು.

ಆದರೆ ಪ್ರವೀಣ್ ತಾಯಿ ಯುವತಿಯ ಜಾತಕವನ್ನು ಜ್ಯೋತಿಷಿಯೊಬ್ಬರಿಗೆ ತೋರಿಸಿದ್ದರು. ಜ್ಯೋತಿಷಿ ಈ ಯುವತಿಗೆ ಕುಜ ದೋಷ ಇದೆ. ಇವಳೊಂದಿಗೆ ವಿವಾಹವಾದರೆ ನಿಮ್ಮ ಮಗನ ಆಯಸ್ಸು ಕಡಿಮೆ ಆಗತ್ತದೆ ಎಂದು ಹೇಳಿದ್ದಾರೆ.

ಹೀಗಾಗಿ ಕುಜ ದೋಷ ಇರುವ ಹುಡುಗಿ ಜೊತೆ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಪ್ರವೀಣ್ ತಾಯಿ ತಿಳಿಸಿದ್ದರು. ಅಲ್ಲದೇ ಯುವತಿ ಸುಧಾಳಿಗೂ ಫೋನ್ ಮಾಡಿ ನನ್ನ ಮಗನ ಸಹವಾಸ ಬಿಟ್ಟು ಬಿಡು. ಈ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಆವಾಜ್ ಕೂಡ ಹಾಕಿದ್ದರಂತೆ. ಇದನ್ನು ಓದಿ : ಜೂನ್ 19ರಂದು ಮಧ್ಯರಾತ್ರಿ ತನಕವೂ ನಮ್ಮ ಮೆಟ್ರೋ ಸಂಚಾರ : 50 ರು ಟಿಕೆಟ್

ಈ ನಿರ್ಧಾರದಿಂದ ಮನನೊಂದ ಪ್ರೇಮಿಗಳು ಮೇ.31ರಂದು ಭದ್ರಾವತಿಯ ಎಪಿಎಂಸಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ನಂತರ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಯುವತಿ ಸುಧಾಳನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್‍ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!