ಲಿವ್ ಇನ್ ರಿಲೇಶನ್‌ಶಿಪ್‍ನಲ್ಲಿದ್ದ ಪ್ರೇಮಿಗಳ ನಡುವೆ ಜಗಳವು ಪ್ರಿಯತಮೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ.
ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿ ಹಾಗೂ ನೇಪಾಳ ಮೂಲದ ಸಂತೋಷ್ ದಾಮಿ (27) ಕೊಲೆ ಮಾಡಿದ ಆರೋಪಿ.ಇಂದು ಮತ್ತೆ ಇಬ್ಬರು ನಾನ್ ಐಪಿಎಸ್ ಅಧಿಕಾರಿ, 30 ಇನ್ಸ್ಪೆಕ್ಟರ್ಗಳ ವರ್ಗಾವಣೆ – ಸರ್ಕಾರದ ಆದೇಶ
ಕೃಷ್ಣ ಕುಮಾರಿ ಹೊರಮಾವು ಯೂನಿಸೆಕ್ಸ್ ಸ್ಪಾದಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಳು. ಸಂತೋಷ್ ಟಿ.ಸಿ ಪಾಳ್ಯದಲ್ಲಿ ಬಾರ್ಬರ್ ಶಾಪ್‍ನಲ್ಲಿ ಕೆಲಸ ಮಾಡುತ್ತಿದ್ದ.
ಈ ಇಬ್ಬರಿಗೂ ಪರಿಚಯವಾಗಿ ಪ್ರೇಮಾಂಕುರವಾಗಿತ್ತು. ಅದಾದ ಬಳಿಕ ಕೃಷ್ಣಕುಮಾರಿ ಹಾಗೂ ಸಂತೋಷ್ ಇಬ್ಬರು ಸೇರಿ ರಾಮೂರ್ತಿನಗರದ ಟಿಸಿಪಾಳ್ಯದಲ್ಲಿ ಬಾಡಿಗೆ ರೂಮ್‍ನ್ನು ಪಡೆದಿದ್ದಾರೆ.
ಆ ಬಳಿಕ ಅದೇ ಬಾಡಿಗೆ ರೂಂನಲ್ಲೇ ಇಬ್ಬರೂ ವಾಸಿಸುತ್ತಿದ್ದರು.
ಇಂದು ಬೆಳಗ್ಗೆ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಜಗಳ ತಾರಕ್ಕೇರಿದ್ದು ಕೃಷ್ಣಕುಮಾರಿಯನ್ನು ಸಂತೋಷ್ ದಾಮಿ ಕೊಲೆ ಮಾಡಿದ್ದಾನೆ.
ರಾಮೂರ್ತಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದು ವರ್ಷದ ಹಿಂದೆ ಈ ಇಬ್ಬರೂ ಬೆಂಗಳೂರಿಗೆ ಬಂದಿರುವ ಬಗ್ಗೆ ಮಾಹಿತಿ ಇದೆ .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು