Main News

ಮಹಿಳೆಯರು ಪೊಲೀಸ್ ಸೇವೆಗೆ ಸೇರಲು ಉತ್ತೇಜಿಸಿ : ವಿಪುಲ್ ಕುಮಾರ್

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದರುವ ಮಹಿಳಾ ಪೊಲೀಸ್‌ಗಳ ಸೇವಾ ದಕ್ಷತೆ ಉತ್ತಮವಾಗಿದೆ. ಹಾಗಾಗಿ ಮಹಿಳೆಯರಿಗೆ ಪೊಲೀಸ್ ಸೇವೆಗೆ ಸೇರಲು ಇನ್ನೂ ಹೆಚ್ಚು ಉತ್ತೇಜಿಸಬೇಕಿದೆ ಎಂದು ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕರಾದ ವಿಪುಲ್ ಕುಮಾರ್ ಹೇಳಿದರು.

ಮಂಗಳವಾರ ಸಿ.ಆರ್ ಕವಾಯತು ಮೈದಾನದಲ್ಲಿ ನಡೆದ ಮೈಸೂರಿನ ಪೊಲೀಸ್ ತರಬೇತಿ ಶಾಲೆಯ ೫ನೇ ತಂಡದ ಮಹಿಳಾ ನಾಗರಿಕ ಪೊಲೀಸ್ ಕಾನ್ಸ್ಟೇಬಲ್, ರೈಲ್ವೇಸ್ ಮತ್ತು ಕೆಎಸ್‌ಐಎಸ್‌ಎಫ್ ಪ್ರಶಿಕ್ಷಣಾರ್ಥಿಗಳ ಹಾಗೂ ಮೈಸೂರು ನಗರದ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ ೨ ನೇ ತಂಡದ ಮಹಿಳಾ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೊಲೀಸ್ ಸೇವೆಗೆ ತನ್ನದೇ ಆದ ಹಿರಿಮೆಯಿದೆ. ಎಲ್ಲರಿಗೂ ಜನರ ಸೇವೆ ಮಾಡಲು ಅವಕಾಶ ಸಿಗುವುದಿಲ್ಲ. ಆದರೆ ನಮಗೆ ಅಂತಹ ಅವಕಾಶ ದೊರೆತಿರುವುದನ್ನು ಉತ್ತಮ ಅವಕಾಶ ಎಂದು ಭಾವಿಸಬೇಕು ಎಂದು ಹೇಳಿದರು.

ಪೊಲೀಸ್ ಸೇವೆಗೆ ಸೇರಿದ ಮೇಲೆ ನಾವು ಯಾವ ಹುದ್ದೆಯಲ್ಲಿ ಇದ್ದೇವೆ ಎಂಬುದನ್ನು ಮರೆತು, ಸಮಸ್ಯೆ ಹೊತ್ತು ಬರುವ ಜನರಿಗೆ ಸ್ಪಂದಿಸಬೇಕು. ಜನರ ಸಮಸ್ಯೆ ಪರಿಹರಿಸುವುದೇ ನಮ್ಮ ಗುರಿಯಾಗಿರಬೇಕು ಎಂದರು.

ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಶಿವರಾಜು ಅವರು ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಿರ್ಗಮನ ಪಥ ಸಂಚಲನದಲ್ಲಿ ಶಿಸ್ತಿನ ಹೆಜ್ಜೆ ಹಾಕುವ ಮೂಲಕ ಪ್ರಶಿಕ್ಷಣಾರ್ಥಿಗಳು ನಡೆಸಿದ ಆಕರ್ಷಕ ಫಥ ಸಂಚಲನವು ಎಲ್ಲರ ಮೆಚ್ಚುಗೆ ಪಾತ್ರವಾಯಿತು.

ತರಬೇತಿ ಅವಧಿಯಲ್ಲಿ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಬೆಂಗಳೂರಿನ ಎಂ. ಅನಿತಲಕ್ಷ್ಮಿ ಅವರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ನೀಡಲಾಯಿತು.

ಬಹುಮಾನ ಪಡೆದವರ ಪಟ್ಟಿ ಇಂತಿದೆ:

ಒಳಾಂಗಣ ಪ್ರಶಸ್ತಿ : ಸಿ.ಆರ್. ಆಶಾ (ಪ್ರಥಮ), ಎಂ. ಅನಿತ ಲಕ್ಷ್ಮಿ (ದ್ವಿತೀಯ), ಬಿ.ಎಂ. ಪುಷ್ಪಾವತಿ (ತೃತೀಯ),
ಹೊರಾಂಗಣ ಪ್ರಶಸ್ತಿ: ಸಿ.ಆರ್. ಮಮತ( ಪ್ರಥಮ), ಟಿ.ಎಸ್.ಕುಸುಮ (ದ್ವೀತಿಯ), ಪಿ. ಚೈತ್ರ (ತೃತೀಯ),
ರೈಫಲ್ ಶೂಟಿಂಗ್ ಪ್ರಶಸ್ತಿ : ಸುಷ್ಮಾ ಪಟಗಾರ್ (ಪ್ರಥಮ), ಕವಿತ ಪೂಜಾರಿ (ದ್ವಿತೀಯ), ಕೆ.ಟಿ. ಅಕ್ಷತ (ತೃತೀಯ).

ಈ ವೇಳೆ ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಡಿಸಿಪಿ ಪ್ರಕಾಶ್ ಗೌಡ, ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಡಾ.ಧರಣೀದೇವಿ ಮಾಲಗತ್ತಿ ಇತರರು ಉಪಸ್ಥಿತರಿದ್ದರು.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024