November 19, 2024

Newsnap Kannada

The World at your finger tips!

2 arest

ಕೆಲಸದ ಆಮಿಷ – 400 ಮಂದಿಗೆ 22 ಕೋಟಿ ರೂ. ಪಂಗನಾಮ– ಇಬ್ಬರ ಬಂಧನ

Spread the love

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರು ಅಭ್ಯರ್ಥಿಗಳಿಂದ ಸುಮಾರು 22 ಕೋಟಿ ರೂ. ಪಡೆದು ವಂಚಿಸಿದ್ದ ಜಾಲವನ್ನು ಭೇದಿಸಿರುವ ರೈಲ್ವೆ ಭದ್ರತಾ ಪಡೆ ಮೈಸೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ಮೈಸೂರಿನ ಚಂದ್ರಗೌಡ ಎಸ್.ಪಾಟೀಲ (44) ಹಾಗೂ ಗದಗ ಜಿಲ್ಲೆಯ ಶಿವಸ್ವಾಮಿ (62) ಬಂಧಿತ ಆರೋಪಿಗಳು.

ಸುಮಾರು 400 ಅಭ್ಯರ್ಥಿಗಳಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ 22 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂದು ರೇಲ್ವೆ ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಲವರು ಜಮೀನು ಮಾರಿ ಹಣ ನೀಡಿದ್ದಾರೆ. ಇನ್ನೂ ಕೆಲವರು ಕೈಸಾಲ ಮಾಡಿ ಹಣ ನೀಡಿದ್ದಾರೆ. ಒಟ್ಟು 221 ಸಹಿ ಮಾಡಿರುವ ಖಾಲಿ ಚೆಕ್‍ಗಳು, 4.15 ಲಕ್ಷ ರೂ. ನಗದು, ಆಕಾಂಕ್ಷಿ ಅಭ್ಯರ್ಥಿಗಳ ಮೂಲ ದಾಖಲೆಗಳು, ಚೆಕ್ ಪುಸ್ತಕಗಳು, ಸುಮಾರು 100 ನಕಲಿ ರೈಲ್ವೆ ನೇಮಕಾತಿ ಆದೇಶಗಳು, 70 ಟಿಟಿಇಗಳ ನಕಲಿ ನಾಮಫಲಕಗಳು, ಲ್ಯಾಪ್‍ಟಾಪ್, ಕಂಪ್ಯೂಟರ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳನ್ನು ಮಂಡಿ ಮೊಹಲ್ಲಾದ ಸರ್ಕಲ್ ಇನ್‍ಸ್ಪೆಕ್ಟರ್ ಅವರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!