ಮದ್ದೂರಿನ ಶ್ರೀ ಹೊಳೆ ಆಂಜನೇಯ ದೇವಾಲಯದ ಬಳಿ ತಡೆಗೋಡೆ ನಿರ್ಮಾಣ ಮಾಡಬೇಕೆಂದು ಬಹಳ ದಿನಗಳಿಂದ ಬೇಡಿಕೆ ಇತ್ತು. ಮದ್ದೂರಿನಲ್ಲಿ 4 ತಡೆಗೋಡೆಗಳ ಕಾಮಗಾರಿಗೆ ಸರ್ಕಾರದಿಂದ ಒಟ್ಟು 21 ಕೋಟಿ ರೂ ಹಣ ಮಂಜೂರಾಗಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಮದ್ದೂರು ತಾಲ್ಲೂಕಿನಲ್ಲಿ ನಡೆದ ಶ್ರೀ ಹೊಳೆ ಆಂಜನೇಯ ದೇವಾಲಯದ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿ ಗುದ್ಧಲಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.
ಹೊಳೆ ಆಂಜನೇಯ ದೇವಾಲಯದ ಬಳಿ 307 ಲಕ್ಷ ರೂ ಅಂದಾಜು ವೆಚ್ಚದಲ್ಲಿ ತಡೆಗೋಡೆ ನಿರ್ಮಾಣದ ಕಾಮಗಾರಿಯಾಗುತ್ತಿದೆ. ಮದ್ದೂರು ಪಟ್ಟಣದ ಕೊಳಚೆ ನೀರು ಶುದ್ಧೀಕರಣ ಘಟಕದ ಬಳಿ ಇರುವ ಶಿಂಷಾ ನದಿಗೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ 499 ಲಕ್ಷ ರೂ ಮಂಜೂರಾಗಿದೆ ಎಂದರು.
ನಾಡಿನ ಜನತೆಗೆ ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಸಬ್ಸಿಡಿ, ಸಹಾಯಧನ, ಪಿಂಚಣಿ ಸೇರಿದಂತೆ ಎಲ್ಲ ಇಲಾಖೆಗಳ ಸೌಲಭ್ಯವನ್ನು ನಿರಂತರವಾಗಿ ಜನರಿಗೆ ನೀಡುತ್ತಿದ್ದೇವೆ. ಶಾಸಕ ಉದಯ್ ಅಧಿಕಾರಕ್ಕೆ ಬಂದ 8- 10 ತಿಂಗಳ ಅವಧಿಯಲ್ಲಿಯೇ ಜನರಿಗೆ ಅನುಕೂಲವಾಗುವಂತಹ ಕಾರ್ಯವನ್ನು ಮಾಡಿದ್ದಾರೆ ಎಂದು ಶಾಸಕ ಕೆ. ಎಂ. ಉದಯ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಪೋಷಕರಿಂದ ಮದ್ಯಪಾನ ಮಾಡದಂತೆ ಬುದ್ದಿವಾದ – ಆತ್ಮಹತ್ಯೆಗೆ ಶರಣಾದ ಯುವಕ
ಕಾರ್ಯಕ್ರಮದಲ್ಲಿ ಮದ್ದೂರು ವಿಧಾನಸಭಾ ಶಾಸಕ ಕೆ. ಎಂ. ಉದಯ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ