ಮಹಿಳಾ ಪ್ರಪಂಚವೇ ಒಂದು ವಿಸ್ಮಯ ಲೋಕ : World Women’s Day Special

Team Newsnap
1 Min Read

ಮಹಿಳೆಯರ ಸಾಧನೆಯನ್ನು ಸ್ಮರಿಸಲು ಪ್ರತಿ ವರ್ಷ ಮಾರ್ಚ್ 8 ರಂದು ( World Women’s Day ) ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ.

ಮಹಿಳಾ ದಿನಾಚರಣೆಯ ಮಹತ್ವ ಮತ್ತು ಇತಿಹಾಸದ ಬಗ್ಗೆ ಸ್ಮರಿಸುವುದಾದರೆ 1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದುಡಿಯುವ ಮಹಿಳೆಯರು ಪಾಲ್ಗೊಂಡಿದ್ದರು. ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು ಮತ್ತು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದರು.

ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಮತ್ತು ವೇತನ ಶ್ರೇಣಿಯನ್ನು ಹೆಚ್ಚಿಸಬೇಕು ಎಂದು ಕಾರ್ಮಿಕ ಮಹಿಳೆಯರು ಒತ್ತಾಯಿಸಿದ್ದರು.

ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಬೇಕೆಂದು ಬೇಡಿಕೆಯಿಟ್ಟಿದ್ದರು. ಮಹಿಳೆಯರ ಧ್ವನಿ ಅಂದಿನ ಸರ್ಕಾರದ ಕಿವಿಗೆ ಬಿದ್ದಿತ್ತು. ನಂತರ 1909 ರಲ್ಲಿ, ಚಳುವಳಿಯ ಒಂದು ವರ್ಷದ ನಂತರ, ಅಮೆರಿಕಾದ ಸಮಾಜವಾದಿ ಪಕ್ಷ ಮಹಿಳಾ ದಿನವನ್ನು ಘೋಷಿಸಿತು.

ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಮಹಿಳೆಯರ ಸಾಧನೆಯನ್ನು ನೆನೆಯುವ ಮೂಲಕ ಮಹಿಳೆಯರಿಗೆ ಪ್ರೋತ್ಸಾಹ ನೀಡಲಾಗುತ್ತದೆ.

ಹುಟ್ಟಿದ ಪ್ರತಿಯೊಂದು ಹೆಣ್ಣು ಮಗು ತನ್ನ ಜೀವನದುದ್ದಕ್ಕೂ ಮಗಳಾಗಿ, ಹೆಂಡತಿಯಾಗಿ, ತಾಯಿಯಾಗಿ, ಸ್ನೇಹಿತೆ, ಸಹೋದರಿ, ಸಹೋದ್ಯೋಗಿಯಾಗಿ ಹೀಗೆ ಹಲವಾರು ಹಂತಗಳನ್ನು ಪೂರೈಸುತ್ತಾಳೆ.


ತಂದೆ-ತಾಯಿ, ಗಂಡ, ಮಕ್ಕಳು, ಕಚೇರಿ ಹೀಗೆ ತನ್ನವರನ್ನು ತನ್ನ ಕೆಲಸವನ್ನು ಅತ್ಯಂತ ಅಚ್ಚಕಟ್ಟಾಗಿ, ಕಾಳಜಿಯಿಂದ, ಸಹನೆಯಿಂದ ಮತ್ತು ಪ್ರೀತಿಯಿಂದ ನೋಡಿಕೊಳ್ಳುತ್ತಾಳೆ. ಆದರೂ ನಮ್ಮ ಸಮಾಜದಲ್ಲಿ ಹೆಣ್ಣು ಹೆಚ್ಚು ಶೋಷಣೆಗೆ ಒಳಗಾಗುವುದು ದುರ್ದೈವ. ಹೀಗಾಗಿ ಹೆಣ್ಣಿಗೆ ಉನ್ನತ ಸ್ಥಾನಮಾನಗಳನ್ನು ನೀಡಬೇಕು ಎನ್ನುವ ಕೂಗು ಎಂದಿನಿಂದಲೂ ಇದೆ.

ಆದರೆ ಇಂದಿಗೂ ಕೂಡ ಒಂಟಿ ಮಹಿಳೆ ತಡ ರಾತ್ರಿ ಇರಲಿ ಹಗಲಲ್ಲೂ ನಿರ್ಭಯವಾಗಿ ಓಡಾಡಲು ಸಾಧ್ಯವಾಗುತ್ತಿಲ್ಲ. ಇಂತಹ ಸಮಸ್ಯೆಗಳ ನಡುವೆಯೂ ಮಹಿಳೆ ರಾಜಕೀಯವಾಗಿ, ಸಾಮಾಜಿಕವಾಗಿ ಹಲವಾರು ಕ್ಷೇತ್ರಗಳಲ್ಲಿ ಮುಂದಿದ್ದಾಳೆ. ಹಲವಾರು ರಂಗಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿದ್ದಾಳೆ.

Share This Article
Leave a comment