ದಾಖಲೆ ಬರೆದ ವಿಶ್ವದ ಎತ್ತರದ ಕೆಂಪೇಗೌಡ ಪ್ರತಿಮೆ : ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆ

Team Newsnap
1 Min Read

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಕೆಂಪೇಗೌಡ ಕಂಚಿನ ಪ್ರತಿಮೆಯು ಉದ್ಘಾಟನೆಗೂ ಮುನ್ನವೇ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಗೊಂಡಿದೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ , ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ.108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ ಎಂದಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ನಿರ್ಮಿಸಿರುವಂತ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು (ನಾಳೆ)ನವೆಂಬರ್ 11, 2022ರಂದು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಲಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

Share This Article
Leave a comment