January 5, 2025

Newsnap Kannada

The World at your finger tips!

punia

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

Spread the love

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA ) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ.

ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಭಜರಂಗ್ ಪುನಿಯಾ ಮೂತ್ರದ ಮಾದರಿಯನ್ನು (Urine Sample) ನೀಡದಿದ್ದ ಕಾರಣ ಭವಿಷ್ಯದ ಯಾವುದೇ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸದಂತೆ ಅಮಾನತುಗೊಳಿಸುವ ಆದೇಶವನ್ನು ನಾಡಾ ಹೊರಡಿಸಿದೆ.

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಸ್ಪರ್ಧಿಸುವ ಅವರ ಪ್ರಯತ್ನಕ್ಕೆ ಹಿನ್ನಡೆಯಾಗಲಿದೆ.

ನಿಗದಿತ ಸಮಯದ ಒಳಗಡೆ ಮೂತ್ರದ ಮಾದರಿ ನೀಡುವಂತೆ ಕೇಳಿದ್ದರೂ ಪುನಿಯಾ ನೀಡಿಲ್ಲ ಎಂದು ನಾಡಾ ತಿಳಿಸಿದೆ.ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಮೇ 7ರ ಒಳಗಡೆ ನಾಡಾ ಮೂತ್ರದ ಮಾದರಿಯನ್ನು ನೀಡದ್ದು ಯಾಕೆ ಎನ್ನುವುದರ ಬಗ್ಗೆ ಲಿಖಿತವಾಗಿ ಕಾರಣವನ್ನು ತಿಳಿಕಾಸಬೇಗಿದ್ದು ,ಅವಧಿಯ ಒಳಗಡೆ ಸರಿಯಾದ ಕಾರಣ ನೀಡದಿದ್ದರೆ ಮುಂದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

Copyright © All rights reserved Newsnap | Newsever by AF themes.
error: Content is protected !!