ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಮತ್ತು ಬಿಜೆಪಿಯ ಸಂಸತ್ ಸದಸ್ಯ ಬ್ರಿಜ್ ಭೂಷಣ್ ಶರಣ್ ಸಿಂಗ್ , ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಬ್ರಿಜ್ ಭೂಷಣ್ ತಮ್ಮ ಮೇಲಿನ ಆರೋಪಗಳ ಸಾಕ್ಷ್ಯಾಧಾರಗಳಿದ್ದರೆ ಅದನ್ನು ನ್ಯಾಯಾಲಯಕ್ಕೆ (Court) ಹಾಜರುಪಡಿಸಿ ಮತ್ತು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದರು.
ಲೈಂಗಿಕ ಕಿರುಕುಳ (Sexual Harassment) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು 15 ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿಕೆಯ ಬೆನ್ನಲ್ಲೇ ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಸಿಂಗ್ ತಿರುಗೇಟು ನೀಡಿದ್ದಾರೆ.
ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ , ಒಲಿಂಪಿಕ್ಸ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಕ್ರೀಡಾಪಟುಗಳು ಜನವರಿಯಲ್ಲಿ ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ, ನಿವೇಶ್ ಪೋಗಟ್ ಚಾಂಪಿಯನ್ಶಿಪ್ಗಳಲ್ಲಿ ಗೆದ್ದ ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ವಿಸರ್ಜಿಸುವುದಾಗಿ ಹೇಳಿದ್ದಾರೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಲು ಪೊಲೀಸರಿಗೆ ಕುಸ್ತಿಪಟುಗಳು ಸಾಕ್ಷ್ಯಗಳನ್ನು ನೀಡಿಲ್ಲ.ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
15 ದಿನಗಳಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸುವುದಾಗಿ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
More Stories
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ
259 ರನ್ ಗಳಿಗೆ ನ್ಯೂಜಿಲೆಂಡ್ ಆಲ್ ಔಟ್ : ಸೇಡು ತೀರಿಸಿಕೊಳ್ಳುವ ತವಕದಲ್ಲಿ ಭಾರತ