ಮೈಸೂರು : ಬಿಜೆಪಿ ಹೈಕಮಾಂಡ್ ಈ ಬಾರಿ ಯದುವೀರ್ ಒಡೆಯರ್ (Yaduveer Wadiyar) ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ.
ಈ ಬಾರಿ ಹಾಲಿ ಸಂಸದರಾಗಿರುವ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದ್ದು , ಮೈಸೂರಿನ ರಾಜವಂಶಸ್ಥ ಯದುವೀರ್ ಒಡೆಯರ್‌ಗೆ ಟಿಕೆಟ್ ಸಿಗುವ ಸಾಧ್ಯತೆಗಳಿವೆ.
ಯದುವೀರ್ ಒಡೆಯರ್ ಹೆಸರು ಕೇಳಿ ಬರುತ್ತಿದ್ದರೂ ಅದು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿರಲಿಲ್ಲ. ಆದರೆ ಈಗ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯದುವೀರ್ ಒಡೆಯರ್ ಹೆಸರು ಪ್ರಸ್ತಾಪವಾಗಿದೆ.
ಯದುವೀರ್ ಒಡೆಯರ್ ಅವರನ್ನು ಈಗಾಗಲೇ ಬಿಜೆಪಿ ಸಂಪರ್ಕಿಸಿದ್ದು ,ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ನಾಯಕರು ಪ್ರಮೋದಾ ದೇವಿ (Pramoda Devi) ಗ್ರೀನ್ ಸಿಗ್ನಲ್‌ಗೆ ಕಾಯುತ್ತಿದ್ದಾರೆ.
ಮನವೊಲಿಕೆಯ ಬೆನ್ನಲ್ಲೇ ಪ್ರತಾಪ್ ಸಿಂಹ ಜೊತೆ ಯದುವೀರ್ ಒಡೆಯರ್ ಹೆಸರನ್ನು ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲೇ ಶಿಫಾರಸ್ಸು ಮಾಡಲಾಗಿದೆ.
ಮೈಸೂರಿನ ಸಂಸದರಾಗಿದ್ದರಾಗಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಾಲ್ಕು ಬಾರಿ ಆಯ್ಕೆ ಅಗಿದ್ದರು. ಕಾಂಗ್ರೆಸ್ಸಿನಿಂದ ನಾಲ್ಕು ಬಾರಿ ಗೆದ್ದು ಎರಡು ಬಾರಿ ಅವರು ಸೋತಿದ್ದರು. 1984 ,1989, 1996, 1999ರಲ್ಲಿ ಗೆದ್ದಿದ್ದರೆ 1991 ಹಾಗೂ 2004ರಲ್ಲಿ ಸೋಲು ಅನುಭವಿಸಿದ್ದರು.
ಈಗಲೂ ಹಳೆ ಮೈಸೂರು ಭಾಗದಲ್ಲಿ ಮೈಸೂರು ರಾಜವಂಶಸ್ಥರ ಬಗ್ಗೆ ಜನರಲ್ಲಿ ಗೌರವವಿದೆ. ರಾಜರು ಮೈಸೂರಿನಲ್ಲಿ ಶಿಕ್ಷಣ,ನೀರಾವರಿ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ.
ಈ ಕಾರಣಕ್ಕೆ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದರೆ ಹಳೆ ಮೈಸೂರು ಭಾಗ ಸೇರಿದಂತೆ ರಾಜ್ಯದಲ್ಲೂ ಪ್ರಭಾವ ಬೀರಬಹುದು ಎಂಬುದು ಬಿಜೆಪಿ ಲೆಕ್ಕಚಾರ.
ಹಾಲಿ ಶಾಸಕ ಪ್ರತಾಪ್ ಸಿಂಹನ ಭವಿಷ್ಯ ?
ಪ್ರತಾಪ್ ಸಿಂಹ ಸತತ ಎರಡು ಬಾರಿ ಸಂಸದರಾಗಿ ಆಯ್ಕೆ ಆಗಿದ್ದು , ಮೂರನೇ ಬಾರಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ರಾಜ್ಯದ ಹಲವು ಬಿಜೆಪಿ ಸಂಸದರು ತಮ್ಮ ಸಾಧನೆ ಕೈಪಿಡಿ ಹೊರತರದೇ ಇದ್ದರೂ ಪ್ರತಾಪ್ ಸಿಂಹ ಬಿಜೆಪಿಯ ಅಗ್ರ ನಾಯಕರಿಗೆ ತಮ್ಮ ಕೆಲಸದ ಸಾಧನೆಯ ಕೈಪಿಡಿಯನ್ನು ನೀಡಿದ್ದಾರೆ.
ಪ್ರತಾಪ್ ಸಿಂಹ ಅವರ ಮುಂದಿನ ರಾಜಕೀಯ ಭವಿಷ್ಯ ಏನು ಎಂಬದು ಪ್ರಶ್ನೆಯಾಗಿದ್ದು ,ಇನ್ನೂ ಮೈಸೂರು ಟಿಕೆಟ್ ಯಾರಿಗೆ ಸಿಗಲಿದೆ ಎನ್ನುವುದು ಅಂತಿಮವಾಗಿಲ್ಲ.
ಯದುವೀರ್ ಒಡೆಯರ್ ಸ್ಪರ್ಧಿಸಿದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗುವುದು ಅನುಮಾನವಾಗಿದ್ದು , ಬೇರೆ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕರೂ ಸಿಗಬಹುದು ಎಂಬ ಮಾತು ಕೇಳಿ ಬರುತ್ತಿದೆ .ಲೋಕಸಭೆ ಚುನಾವಣೆ : 39 ಅಭ್ಯರ್ಥಿಗಳ ಮೊದಲ ಪಟ್ಟಿ ಕಾಂಗ್ರೆಸ್‌ನಿಂದ ಬಿಡುಗಡೆ
2014ರ ಚುನಾವಣೆಯಲ್ಲಿ ಮೊದಲ ಬಾರಿ ಸ್ಪರ್ಧಿಸಿದ್ದ ತಾಪ್ ಸಿಂಹ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 31,608 ಮತಗಳಿಂದ ಗೆದ್ದು ,2019ರ ಚುನಾವಣೆಯಲ್ಲಿ 1,38,647 ಮತಗಳ ಅಂತರದಿಂದ ಮೈತ್ರಿ ಅಭ್ಯರ್ಥಿಯನ್ನು ಸೋಲಿಸಿದ್ದರು.
More Stories
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ
HDK – ನಿಖಿಲ್ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು ದಾಖಲು