Karnataka

ಮೈಸೂರಿನಿಂದ ಸಿಂಹ ಬದಲು ಯದುವೀರ್‌ ಒಡೆಯರ್‌ ಸ್ಪರ್ಧೆ ?

ಮೈಸೂರು : ಬಿಜೆಪಿ ಹೈಕಮಾಂಡ್‌ ಈ ಬಾರಿ ಯದುವೀರ್‌ ಒಡೆಯರ್‌ (Yaduveer Wadiyar) ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ.

ಈ ಬಾರಿ ಹಾಲಿ ಸಂಸದರಾಗಿರುವ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಸಿಗುವುದು ಅನುಮಾನ ಎನ್ನಲಾಗುತ್ತಿದ್ದು , ಮೈಸೂರಿನ ರಾಜವಂಶಸ್ಥ ಯದುವೀರ್‌ ಒಡೆಯರ್‌ಗೆ ಟಿಕೆಟ್‌ ಸಿಗುವ ಸಾಧ್ಯತೆಗಳಿವೆ.

ಯದುವೀರ್‌ ಒಡೆಯರ್‌ ಹೆಸರು ಕೇಳಿ ಬರುತ್ತಿದ್ದರೂ ಅದು ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆ ಆಗಿರಲಿಲ್ಲ. ಆದರೆ ಈಗ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯದುವೀರ್‌ ಒಡೆಯರ್‌ ಹೆಸರು ಪ್ರಸ್ತಾಪವಾಗಿದೆ.

ಯದುವೀರ್‌ ಒಡೆಯರ್‌ ಅವರನ್ನು ಈಗಾಗಲೇ ಬಿಜೆಪಿ ಸಂಪರ್ಕಿಸಿದ್ದು ,ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ನಾಯಕರು ಪ್ರಮೋದಾ ದೇವಿ (Pramoda Devi) ಗ್ರೀನ್ ಸಿಗ್ನಲ್‌ಗೆ ಕಾಯುತ್ತಿದ್ದಾರೆ.

ಮನವೊಲಿಕೆಯ ಬೆನ್ನಲ್ಲೇ ಪ್ರತಾಪ್‌ ಸಿಂಹ ಜೊತೆ ಯದುವೀರ್‌ ಒಡೆಯರ್‌ ಹೆಸರನ್ನು ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲೇ ಶಿಫಾರಸ್ಸು ಮಾಡಲಾಗಿದೆ.

ಮೈಸೂರಿನ ಸಂಸದರಾಗಿದ್ದರಾಗಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ನಾಲ್ಕು ಬಾರಿ ಆಯ್ಕೆ ಅಗಿದ್ದರು. ಕಾಂಗ್ರೆಸ್ಸಿನಿಂದ ನಾಲ್ಕು ಬಾರಿ ಗೆದ್ದು ಎರಡು ಬಾರಿ ಅವರು ಸೋತಿದ್ದರು. 1984 ,1989, 1996, 1999ರಲ್ಲಿ ಗೆದ್ದಿದ್ದರೆ 1991 ಹಾಗೂ 2004ರಲ್ಲಿ ಸೋಲು ಅನುಭವಿಸಿದ್ದರು.

ಈಗಲೂ ಹಳೆ ಮೈಸೂರು ಭಾಗದಲ್ಲಿ ಮೈಸೂರು ರಾಜವಂಶಸ್ಥರ ಬಗ್ಗೆ ಜನರಲ್ಲಿ ಗೌರವವಿದೆ. ರಾಜರು ಮೈಸೂರಿನಲ್ಲಿ ಶಿಕ್ಷಣ,ನೀರಾವರಿ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ.

ಈ ಕಾರಣಕ್ಕೆ ಯದುವೀರ್‌ ಒಡೆಯರ್‌ ಅವರಿಗೆ ಟಿಕೆಟ್‌ ನೀಡಿದರೆ ಹಳೆ ಮೈಸೂರು ಭಾಗ ಸೇರಿದಂತೆ ರಾಜ್ಯದಲ್ಲೂ ಪ್ರಭಾವ ಬೀರಬಹುದು ಎಂಬುದು ಬಿಜೆಪಿ ಲೆಕ್ಕಚಾರ.

ಹಾಲಿ ಶಾಸಕ ಪ್ರತಾಪ್‌ ಸಿಂಹನ ಭವಿಷ್ಯ ?

ಪ್ರತಾಪ್‌ ಸಿಂಹ ಸತತ ಎರಡು ಬಾರಿ ಸಂಸದರಾಗಿ ಆಯ್ಕೆ ಆಗಿದ್ದು , ಮೂರನೇ ಬಾರಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ರಾಜ್ಯದ ಹಲವು ಬಿಜೆಪಿ ಸಂಸದರು ತಮ್ಮ ಸಾಧನೆ ಕೈಪಿಡಿ ಹೊರತರದೇ ಇದ್ದರೂ ಪ್ರತಾಪ್‌ ಸಿಂಹ ಬಿಜೆಪಿಯ ಅಗ್ರ ನಾಯಕರಿಗೆ ತಮ್ಮ ಕೆಲಸದ ಸಾಧನೆಯ ಕೈಪಿಡಿಯನ್ನು ನೀಡಿದ್ದಾರೆ.

ಪ್ರತಾಪ್‌ ಸಿಂಹ ಅವರ ಮುಂದಿನ ರಾಜಕೀಯ ಭವಿಷ್ಯ ಏನು ಎಂಬದು ಪ್ರಶ್ನೆಯಾಗಿದ್ದು ,ಇನ್ನೂ ಮೈಸೂರು ಟಿಕೆಟ್‌ ಯಾರಿಗೆ ಸಿಗಲಿದೆ ಎನ್ನುವುದು ಅಂತಿಮವಾಗಿಲ್ಲ.

ಯದುವೀರ್‌ ಒಡೆಯರ್‌ ಸ್ಪರ್ಧಿಸಿದರೆ ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗುವುದು ಅನುಮಾನವಾಗಿದ್ದು , ಬೇರೆ ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಕ್ಕರೂ ಸಿಗಬಹುದು ಎಂಬ ಮಾತು ಕೇಳಿ ಬರುತ್ತಿದೆ .ಲೋಕಸಭೆ ಚುನಾವಣೆ : 39 ಅಭ್ಯರ್ಥಿಗಳ ಮೊದಲ ಪಟ್ಟಿ ಕಾಂಗ್ರೆಸ್‌ನಿಂದ ಬಿಡುಗಡೆ

2014ರ ಚುನಾವಣೆಯಲ್ಲಿ ಮೊದಲ ಬಾರಿ ಸ್ಪರ್ಧಿಸಿದ್ದ ತಾಪ್‌ ಸಿಂಹ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ 31,608 ಮತಗಳಿಂದ ಗೆದ್ದು ,2019ರ ಚುನಾವಣೆಯಲ್ಲಿ 1,38,647 ಮತಗಳ ಅಂತರದಿಂದ ಮೈತ್ರಿ ಅಭ್ಯರ್ಥಿಯನ್ನು ಸೋಲಿಸಿದ್ದರು.

Team Newsnap
Leave a Comment

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024