ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿಯ ಎರಡನೇ ಮಗನ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಇವತ್ತಿಗೆ (ಅ.30) ಯಶ್ ಎರಡನೇ ಮಗು ಯಥರ್ವ್ ಹುಟ್ಟಿ ಒಂದು ವರ್ಷವಾಗಿದೆ.
ಅಂದ್ಹಾಗೆ ಮುದ್ದು ಮಗನ ಹುಟ್ಟುಹಬ್ಬಕ್ಕೆ ರಾಧಿಕಾ ಪಂಡಿತ್ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ. ಮಗನ ಅಪರೂಪದ ಫೋಟೋಗಳನ್ನು ರಾಧಿಕಾ ಹಂಚಿಕೊಂಡಿದ್ದಾರೆ. ಗರ್ಭಿಣಿ ಆಗಿದ್ದ ಫೋಟೋದಿಂದ ಯಥರ್ವ್ ನಿಗೆ ಒಂದು ವರ್ಷ ತುಂಬುವವರೆಗಿನ ಎಲ್ಲಾ ಫೋಟೋವನ್ನು ಶೇರ್ ಮಾಡಿದ್ದಾರೆ.
ಅಪರೂಪದ ಫೋಟೋಗಳನ್ನು ಹಂಚಿಕೊಂಡು ರಾಧಿಕಾ ಮಗನಿಗೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ. “ಹುಟ್ಟುಹಬ್ಬ ಶುಭಾಶಯಗಳು ನನ್ನ ಪ್ರೀತಿಯ ಮಗನೆ. ಯಾವಾಗಲು ನಿನ್ನನ್ನು ಪ್ರೀತಿಸುತ್ತೇನೆ” ಎಂದು ಮಗನಿಗೆ ಶುಭ ಹಾರೈಸಿದ್ದಾರೆ.
ಮಗನ ಹುಟ್ಟುಹಬ್ಬವನ್ನು ಮನೆಯಲ್ಲೇ ಆಚರಣೆ ಮಾಡಲು ಯಶ್ ದಂಪತಿ ನಿರ್ಧರಿಸಿದ್ದಾರಂತೆ. ಮಗಳ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದರು. ಇಡೀ ಚಿತ್ರರಂಗಕ್ಕೆ ಆಹ್ವಾನ ನೀಡಿದ್ದರು. ಬಹುತೇಕರು ಯಶ್ ಮಗಳ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಮಗನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಿದ್ದರು. ಆದರೆ ಕೊರೊನಾ ಕಾರಣದಿಂದ ಅದ್ದೂರಿ ತನಕ್ಕೆ ಬ್ರೇಕ್ ಬಿದ್ದಿದೆ.
More Stories
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್: ನಾಲ್ಕು ಉಗುರು ವಶಕ್ಕೆ