ಯಶಸ್ವಿನಿ ಯೋಜನೆ’ ಮತ್ತೆ ಜಾರಿ : ನವೆಂಬರ್ 1 ರಿಂದ ನೋಂದಣಿ ಪ್ರಾರಂಭ

Team Newsnap
1 Min Read

ಮುಖ್ಯಮಂತ್ರಿಗಳು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆ ಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ.

ಈ ಕುರಿತು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬ ಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಬಹುದು. ‘ಮಹಾಕಾಳೇಶ್ವರ ಕಾರಿಡಾರ್’ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.

Share This Article
Leave a comment