ಯಾಸಿನ್ ಮಲಿಕ್‍ ಮರಣದಂಡನೆಗೆ ಮನವಿ : ಹೈಕೋರ್ಟ್ ನೋಟಿಸ್

Team Newsnap
1 Min Read
Yasin Malik death sentence plea: High Court notice ಯಾಸಿನ್ ಮಲಿಕ್‍ ಮರಣದಂಡನೆಗೆ ಮನವಿ : ಹೈಕೋರ್ಟ್ ನೋಟಿಸ್

ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್‍ಗೆ ಮರಣದಂಡನೆ ವಿಧಿಸುವಂತೆ ಮನವಿಯ ಮೇರೆಗೆ ದೆಹಲಿ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

2022ರ ಮೇ 24 ರಂದು ನ್ಯಾಯಾಲಯವು ಮಲಿಕ್‍ಗೆ ದೇಶದ್ರೋಹ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು.

ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ್ದ ಪ್ರಕರಣದಲ್ಲಿ ಯಾಸಿನ್ ಮಲಿಕ್ ಅಪರಾಧ ಒಪ್ಪಿಕೊಂಡ ಕಾರಣಕ್ಕೆ ಐಪಿಸಿ ಸೆಕ್ಷನ್ 121ರ ಅಡಿಯಲ್ಲಿ (121 IPC) ಮರಣ ದಂಡನೆಯ ಬದಲಾಗಿ ಜೀವಾವಧಿ ಶಿಕ್ಷೆಗೆ ಮಾರ್ಪಡಿಸಲಾಗಿದೆ ಎಂದು ಕೋರ್ಟ್ ಉಲ್ಲೇಖಿಸಿದೆ.ಎನ್‍ಐಎ (NIA) ಪರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಆರೋಪಿಯು ಭಯೋತ್ಪಾದಕ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ.ಬಿಲ್ ಕಟ್ಟದಿದ್ದರೆ ಕರೆಂಟ್ ಕಟ್ !

ಅಲ್ಲದೆ ಈ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ ಅಪರಾಧಿಗೆ ಮರಣದಂಡನೆ ನೀಡಬೇಕು ಎಂದು ವಾದಿಸಿದರು.

Share This Article
Leave a comment