ಮೈಸೂರು : ನಾನು ನೀಡಿದ ಲಿಸ್ಟ್ ನದ್ದು ಮಾತ್ರ ಮಾಡಿ ಎಂದು ಮಹದೇವ್ ಅವರ ಜೊತೆ ದೂರವಾಣಿ ಕರೆ ಮೂಲಕ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಾರ್ವಜನಿಕ ಸಭೆಯಲ್ಲೇ ಮಾತನಾಡಿರುವ ವಿಡಿಯೋ ವೈರಲ್ ನಿಂದ ಸಿಎಂ ಗೆ ಹೊಸ ಸಂಕಷ್ಟ ಶುರುವಾಗಿದೆ.
ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಯತೀಂದ್ರ ಅವರು ದೂರವಾಣಿ ಕರೆ ಮಾಡಿ “ಹಲೋ ಅಪ್ಪ ” ಅಂತ ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್ ಬಗ್ಗೆ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಅವರು ವಿವೇಕಾನಂದರ ಹೆಸರು ಎತ್ತಿದ್ದಾರೆ ಇದಕ್ಕೆ ಯಾರು ಎಂದು ಯತೀಂದ್ರ ಅವರು ಪ್ರಶ್ನೆ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು.
ಬೇರೊಂದು ಲಿಸ್ಟ್ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ ಅವರು, ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹದೇವರಿಗೆ ಫೋನ್ ನೀಡುವಂತೆ ಸಿದ್ದರಾಮಯ್ಯಗೆ ಸೂಚಿಸುತ್ತಾರೆ. ಬಳಿಕ ಮಹದೇವ್ ಜೊತೆ ಮಾತನಾಡಿದ ಯತೀಂದ್ರ, ಮಹದೇವ್ ಯಾಕೆ ಯಾವ್ದ್ಯಾವುದೋ ಕೊಡ್ತೀಯಾ? ಮತ್ತೆ ಇದೆಲ್ಲಾ ಯಾರು ಕೊಡ್ತಿರೋದು ಅಂತ ಪ್ರಶ್ನೆ ಮಾಡಿದ್ದಾರೆ.
ಇಲ್ಲ ಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿ ಅಂತ ಹೇಳುವಂತೆ ಯತೀಂದ್ರ ಅವರು ಮಹದೇವರಿಗೆ ಸೂಚಿಸಿ ಮಾತು ನಿಲ್ಲಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.
ಈ ಮಹದೇವ್ ಯಾರು?
ಮಹದೇವ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಕರ್ತವ್ಯಾಧಿಕಾರಿ. ವರ್ಗಾವಣೆ ವಿಚಾರವಾಗಿ ಈ ಹಿಂದೆ ಹಲವು ಸಚಿವರ ಕೆಂಗಣ್ಣಿಗೂ ಮಹದೇವ್ ಗುರಿಯಾಗಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ದೂರು ಕೂಡ ನೀಡಲಾಗಿತ್ತು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಾರ್ಮಿಕ ಇಲಾಖೆಯಲ್ಲೂ ಮಹದೇವ್ ಮಧ್ಯಪ್ರವೇಶಿಸಿದ್ದರು. ಸಚಿವರಿಗೆ ಯಾವುದೇ ಮಾಹಿತಿ ನೀಡದೆ ಹೆಚ್ಚುವರಿ 40 ಅಧಿಕಾರಿಗಳ ವರ್ಗಾವಣೆ ಪಟ್ಟಿಯನ್ನು ಮಹದೇವ್ ರೆಡಿ ಮಾಡಿದ್ದರು.
ಮಹದೇವ್ ಅವರ ನಡೆಗೆ ಕೆಂಡಾಮಂಡಲರಾಗಿದ್ದ ಸಂತೋಷ್ ಲಾಡ್, ಅವರನ್ನು ಹುದ್ದೆಯಿಂದ ತಕ್ಷಣ ಬದಲಾಯಿಸುವಂತೆ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದರು.ಆಸ್ತಿ ಲಪಟಾಯಿಸಲು ಪತ್ನಿಯನ್ನೇ ಹತ್ಯೆ ಮಾಡಿದ ಮಂಡ್ಯದ ಪ್ರೋಪೆಸರ್ ಬಂಧನ
ಸದ್ಯ, ಯತೀಂದ್ರ ಅವರು ಕಳಿಸಿದ ಲಿಸ್ಟ್ ವಿಚಾರದಲ್ಲೂ ಇದೇ ಸಮಸ್ಯೆ ಆಗಿರುವ ಸಾಧ್ಯತೆ ಇದೆ .
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ