ಸುಪ್ರೀಂಕೋರ್ಟ್ ಆದೇಶ ನೆಪ ಮಾಡಿಕೊಂಡು ಹಿಂದೂ ದೇವಾಲಯಗಳ ಧ್ವಂಸ ಸರಿಯಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಂದೂ ದೇವಾಲಯಗಳನ್ನು ಧ್ವಂಸ ಮಾಡುವ ಹುನ್ನಾರವನ್ನು ನಾವು ಖಂಡಿಸುತ್ತೇವೆ ಎಂಬುದಾಗಿ ಅವರು ಹೇಳಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ದೇವಸ್ಥಾನಗಳ ತೆರವು ವಿಚಾರಕ್ಕೆ ಆಕ್ರೋಶಗೊಂಡಿದ್ದಾರೆ.
ಸುಪ್ರೀಂಕೋರ್ಟ್ ಆದೇಶವನ್ನು ತಮಗೆ ಬೇಕಾದ ಹಾಗೇ ತಿರುಚಿ ಹಿಂದೂಗಳ ಶ್ರದ್ಧಾ ಕೇಂದ್ರಗಳಿಗೆ ಮಾತ್ರ ಕೈಹಾಕುವ ಯತ್ನಕ್ಕೆ ಅಧಿಕಾರಿಗಳು ಮುಂದಾಗಬಾರದು. ಪ್ರಾರ್ಥನಾ ಮಂದಿರಗಳಿಗೂ ದೇವಸ್ಥಾನಗಳಿಗೂ ಬಹಳ ವ್ಯತ್ಯಾಸವಿದೆ ಎಂದಿದ್ದಾರೆ.
ಕೋರ್ಟ್ ಆದೇಶ ಹಿಂದೂಗಳಿಗೆ ಮಾತ್ರವೇ ಎಂಬುದಕ್ಕೆ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಉತ್ತರಿಸಬೇಕೆಂದು ಒತ್ತಾಯಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು