December 24, 2024

Newsnap Kannada

The World at your finger tips!

bsy g

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ

Spread the love

ಮಾಜಿ ಮುಖ್ಯಮಂತ್ರಿ ಬಿ.ಎಸ್​ಯಡಿಯೂರಪ್ಪ ಮೊಮ್ಮಗಳು ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಎಂಎಸ್ ರಾಮಯ್ಯ ಮೆಡಿಕಲ್ ಕಾಲೇಜ್ ನಲ್ಲಿ ವೈದ್ಯೆಯಾಗಿದ್ದ ಸೌಂದರ್ಯ(30), ಆತ್ಮಹತ್ಯೆ ಮಾಡಿಕೊಂಡಿರುವ ಬಿಎಸ್​ವೈ ಮೊಮ್ಮಗಳು.

2018 ರಲ್ಲಿ ಡಾ ನಿರಂಜನ್ ಎಂಬುವವರ ಜೊತೆ ವಿವಾಹವಾಗಿದ್ದ ಸೌಂದರ್ಯ ಗೆ 9 ತಿಂಗಳ ಮಗು ಇದೆ. ಆ ಮಗುವನ್ನು ಪಕ್ಕದ ರೂಂ ನಲ್ಲಿ ಮಲಗಿಸಿ ನಂತರ ಮತ್ತೊಂದು ರೂಂ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಂದರ್ಯ, ಯಡಿಯೂರಪ್ಪ ಪುತ್ರಿ ಪದ್ಮಾವತಿ ಮಗಳಾಗಿದ್ದಳು. ಸದ್ಯ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಶ್ಯಾಂಗ್ರೀಲಾ ಹೋಟೆಲ್ ಬಳಿ ಇರುವ ಅಪಾರ್ಟ್​ಮೆಂಟ್​ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!