ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು ನಾಮಕರಣ- ಬೊಮ್ಮಾಯಿ

Team Newsnap
1 Min Read

ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರ ಹೆಸರನ್ನಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಘೋಷಿಸಿದರು.

ಶಿವಮೊಗ್ಗದ ಹೊರವಲಯದ ಸೋಗಾನೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಮುಖ್ಯಮಂತ್ರಿಗಳು ಮಾತನಾಡಿದರು.

ವಿಮಾನ ನಿಲ್ದಾಣದ ಹೆಸರನ್ನು ಈಗಾಗಲೇ ರಾಜ್ಯ ಸಚಿವ ಸಂಪುಟವು ಅನುಮೋದಿಸಿದೆ ಮತ್ತು ಈ ಬಗ್ಗೆ ಪ್ರಸ್ತಾವನೆಯನ್ನು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಶಿವಮೊಗ್ಗ ವಿಮಾನ ನಿಲ್ದಾಣವು ರಾಜ್ಯದ ಎರಡನೇ ಅತಿ ಉದ್ದದ ರನ್‌ವೇಯನ್ನು ಹೊಂದಿರುತ್ತದೆ.

”ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಿಂದ ಅನುಮೋದನೆ ಪಡೆದ ನಂತರ ಡಿಸೆಂಬರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ರಾತ್ರಿ ಲ್ಯಾಂಡಿಂಗ್ ಸೌಲಭ್ಯಗಳು ಮತ್ತು ದೊಡ್ಡ ವಿಮಾನಗಳ ಲ್ಯಾಂಡಿಂಗ್ ಸೇರಿದಂತೆ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ಸಮನಾಗಿ ಇದನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ರನ್‌ವೇ ವಿಸ್ತರಣೆ, ಟರ್ಮಿನಲ್ ಕಟ್ಟಡದ ಸುತ್ತಲಿನ ರಸ್ತೆಗಳ ಡಾಂಬರೀಕರಣ ಸೇರಿದಂತೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸರ್ಕಾರ ಹೆಚ್ಚುವರಿಯಾಗಿ 50 ಕೋಟಿ ರು ಬಿಡುಗಡೆ ಮಾಡಲಾಗುವುದು ಎಂದು ಬೊಮ್ಮಾಯಿ ಹೇಳಿದರು.

Share This Article
Leave a comment