ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ ಶಿಕಾರಿಪುರದಿಂದಲೇ ಬಿ.ವೈ ವಿಜಯೇಂದ್ರ ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ಶುಕ್ರವಾರ ಘೋಷಣೆ ಮಾಡಿದರು
ಶಿವಮೊಗ್ಗದ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬಿಎಸ್ವೈ, ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ ಮಾಡೋದನ್ನು ಘೋಷಣೆ ಮಾಡಿದರು. ನಾನು ಕ್ಷೇತ್ರ ಬಿಟ್ಟುಕೊಡುತ್ತಿದ್ದರಿಂದ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ. ಆದರೆ, ಇಲ್ಲಿ ಸ್ಥಾನ ತೆರವಾಗುವುದರಿಂದ ಅವರು ಸ್ಪರ್ಧಿಸುತ್ತಾರೆ. ಕ್ಷೇತ್ರ ಜನತೆ ನನ್ನಗಿಂತ ಹೆಚ್ಚಿನ ಅಂತರದಲ್ಲಿ ವಿಜಯೇಂದ್ರ ಅವರಿಗೆ ಗೆಲುವು ತಂದುಕೊಡಬೇಕು ಎಂದು ಕೈ ಮುಗಿದು ಮನವಿ ಮಾಡ್ತೇನೆ ಎಂದರು. ಮೋದಿ ಪ್ರವಾಸದ ವೇಳೆ ಕಳಪೆ ರಸ್ತೆ ಕಾಮಗಾರಿ : ಇಬ್ಬರು ಇಂಜಿನಿಯರ್ ಗಳ ಅಮಾನತು
ಯಡಿಯೂರಪ್ಪನವರ ಘೋಷಣೆ ನಂತರ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಯಾವ ರೀತಿ ಮಾರ್ಗದರ್ಶನ ಮಾಡುತ್ತಾರೆ. ಪಕ್ಷ ನಾಯಕರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಅದರಂತೆ ನಡೆಯುತ್ತೇನೆ. ಈ ಹಿಂದೆಯೂ ಪಕ್ಷ ಕಟ್ಟುವ ಕಾರ್ಯವನ್ನು ಮಾಡಿದ್ದೇನೆ. ಮುಂದೇನು ನನ್ನ ಕಾರ್ಯ ಮುಂದುವರಿಯುತ್ತದೆ. ಶಿಕಾರಿಪುರ ಸ್ಪರ್ಧೆ ಬಗ್ಗೆ ತಂದೆಯವರನ್ನು ಕೇಳುವ ಪ್ರಶ್ನೆಯೇ ಉದ್ಭವಿಸಿರಲಿಲ್ಲ ಎಂದರು
ಕ್ಷೇತ್ರ ಜನರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯ ಮಾಡಿದ್ದರು. ಆದ್ದರಿಂದ ಈ ಬಗ್ಗೆ ನಿರ್ಧಾರ ಮಾಡಿದ್ದಾರೆ. ಯಡಿಯೂರಪ್ಪ ಅವರಿಗೆ ನಿವೃತ್ತಿ ಎಂಬುವುದೇ ಇಲ್ಲ, ಏಕೆಂದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲೂ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವು ತಂದುಕೊಟ್ಟು ಅಧಿಕಾರಕ್ಕೆ ತರುವ ಕಾರ್ಯವನ್ನು ಮುಂದುವರಿಸುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
ʻಉಪಚುನಾವಣೆಯ ನಂತರ ಗೃಹ ಲಕ್ಷ್ಮಿ ಯೋಜನೆ ನಿಲ್ಲಿಸುತ್ತಾರೆʼ: ಎಚ್.ಡಿ.ಡಿ ಆರೋಪ