ಬೆಂಗಳೂರು: ಮುಂದಿನ 2 ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಳದಿ ವಲಯ ಪ್ರದೇಶದಲ್ಲಿ ಮುಂದಿನ 2 ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಯಾವ ಜಿಲ್ಲೆ ಯೆಲ್ಲೋ ಅಲರ್ಟ್ ನಲ್ಲಿದೆ ?
- ಉತ್ತರ ಕನ್ನಡ
- ದಕ್ಷಿಣ ಕನ್ನಡ
- ಉಡುಪಿ
- ಶಿವಮೊಗ್ಗ
- ಕೊಡಗು
- ಹಾಸನ
- ಚಿಕ್ಕಮಗಳೂರು
ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರ್ನಾಟಕದಲ್ಲಿ ಟೊಯೊಟಾ ಕಿರ್ಲೋಸ್ಕರ್ ನಿಂದ 3,300 ಕೋಟಿ ರೂ ಹೂಡಿಕೆ .
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಕೆಲವೇ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ