ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ ಹೊರಡಿಸಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ತಜ್ಞರು- ಹೇಳಿರುವಂತೆ, ಅಕ್ಟೋಬರ್ 21ರವರೆಗೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ, ಮತ್ತು ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯಿದ್ದು, ಈ ಪ್ರದೇಶಗಳಿಗೆ ‘ಯಲ್ಲೋ’ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಶಿವಮೊಗ್ಗ, ಹಾಸನ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಹ ಭಾರಿ ಮಳೆಯ ಮುನ್ಸೂಚನೆ ಇದೆ ಮತ್ತು ಈ ಜಿಲ್ಲೆಗಳಿಗೆ ‘ಆರೆಂಜ್’ ಅಲರ್ಟ್ ನೀಡಲಾಗಿದೆ.50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
ಅ.18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ‘ಆರೆಂಜ್’ ಅಲರ್ಟ್ ಘೋಷಿಸಲಾಗಿದೆ.
More Stories
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ