December 22, 2024

Newsnap Kannada

The World at your finger tips!

MP yaduveer

ಅರ್ಥಪೂರ್ಣವಾಗಿ ಯೋಗ ದಿನಾಚರಣೆ ಆಯೋಜನೆ – ಸಂಸದ ಯದುವೀರ್

Spread the love

ಮೈಸೂರು : ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21 ರಂದು ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮಾನ್ಯ ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತರಾಜ್ ಒಡೆಯರ್ ಶುತಿಳಿಸಿದರು.

ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾನು ಪ್ರತಿ ವರ್ಷ ಯೋಗ ದಿನಾಚರಣೆ ಯಲ್ಲಿ ಭಾಗವಹಿಸುತ್ತೇನೆ. ಸರ್ಕಾರದಿಂದ ನೀಡಿರುವ 1 ಲಕ್ಷ ಅನುದಾನದ ಜೊತೆಗೆ ವಿವಿಧ ದಾನಿಗಳಿಂದ ಅನುದಾನವನ್ನು ಪಡೆದು ಆ ಅನುದಾನವನ್ನು ಬಳಕೆ ಮಾಡಿ ಉತ್ತಮವಾಗಿ ಯೋಗ ದಿನಾಚರಣೆ ಆಯೋಜನೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮೈಸೂರಿನ ಯೋಗವು ವಿಶ್ವದಲ್ಲೇ ಪ್ರಸಿದ್ಧಿ ಪಡೆದಿದೆ. ರಾಜ್ಯ ಸರ್ಕಾರದಿಂದ ಜಿಲ್ಲಾ ಮಟ್ಟಕ್ಕೆ ಯೋಗ ದಿನಾಚರಣೆ ಆಯೋಜನೆಗೆ 1 ಲಕ್ಷ ಅನುದಾನ ಬರುತ್ತದೆ. ಯೋಗವನ್ನು ಅರಮನೆಯ ಮುಂಭಾಗದಲ್ಲಿ ಆಯೋಜನೆ ಮಾಡಲಾಗುವುದು. ಅಂದು ಬೆಳಿಗ್ಗೆ 7 ಗಂಟೆಗೆ ಯೋಗ ಪ್ರಾರಂಭವಾಗುವುದು. ಕನಿಷ್ಠ 10 ಸಾವಿರ ಯೋಗಪಟುಗಳು ಭಾಗವಹಿಸುವರು ಎಂದರು.

ಸರ್ಕಾರದ ಶಿಷ್ಟಾಚಾರ ಪಾಲನೆ ಮಾಡಿ ಯೋಗ ದಿನಾಚರಣೆಯನ್ನು ಆಯೋಜನೆ ಮಾಡಲಾಗುವುದು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಲಾಗುವುದು. ವೇದಿಕೆ ಕಾರ್ಯಕ್ರಮ ಬೆಳಗ್ಗೆ 6.30 ಕ್ಕೆ ಪ್ರಾರಂಭವಾಗುವುದು. ಅಚ್ಚುಕಟ್ಟಾಗಿ ಯೋಗ ದಿನಾಚರಣೆ ಆಯೋಜನೆಗೆ ವಿವಿಧ ಇಲಾಖೆಗಳಿಗೆ ನಿಯೋಜಿಸುವ ಕಾರ್ಯಗಳನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.ಅಜಿತ್‌ ದೋವಲ್ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮರುನೇಮಕ

ಸಭೆಯಲ್ಲಿ ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!