December 3, 2024

Newsnap Kannada

The World at your finger tips!

WhatsApp Image 2023 06 21 at 10.23.32 AM

Yoga helps mental and physical health: Pratap Simha ಯೋಗ , ಮಾನಸಿಕ - ದೈಹಿಕ ಆರೋಗ್ಯವೃದ್ಧಿಗೆ ಸಹಕಾರಿ : ಪ್ರತಾಪ್ ಸಿಂಹ

ಯೋಗ , ಮಾನಸಿಕ – ದೈಹಿಕ ಆರೋಗ್ಯವೃದ್ಧಿಗೆ ಸಹಕಾರಿ : ಪ್ರತಾಪ್ ಸಿಂಹ

Spread the love

ಮೈಸೂರು :ನಿತ್ಯ ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ದಿಯಾಗುತ್ತದೆ ಎಂದು ಮೈಸೂರು ಕೊಡಗು ಲೋಕಸಭಾ ಸಂಸದ ಪ್ರತಾಪ್ ಸಿಂಹ ಬುಧವಾರ ತಿಳಿಸಿದರು.

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಅರಮನೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಮೈಸೂರು ಅರಮನೆ ಮಂಡಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಾಗೂ ವಿವಿಧ ಯೋಗ ನಿರತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಂಹ ಅವರು ಮಾತನಾಡಿದರು.

2015 ರಲ್ಲಿ ಪ್ರಧಾನ ಮಂತ್ರಿಗಳು ಜೂನ್ 21 ನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡಬೇಕು ಎಂದು ವಿಶ್ವ ಸಂಸ್ಥೆಯಲ್ಲಿ ಮಂಡಿಸಿದರು. ಬಹುತೇಕ ರಾಷ್ಟ್ರಗಳು ಒಪ್ಪಿಗೆ ಸೂಚಿಸಿದವು. ಅಂದಿನಿಂದ ವಿಶ್ವ ಯೋಗ ದಿನಾಚರಣೆ ಮಾಡಲಾಗುತ್ತಿದೆ. ಮೈಸೂರನ್ನು ಸಿಟಿ ಆಫ್ ಯೋಗ ಎಂದು ಕರೆಯಲಾಗುತ್ತದೆ ಎಂದರು.

WhatsApp Image 2023 06 21 at 10.23.31 AM 1

ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ ಅವರು ಮಾತನಾಡಿ ನಾವು ಚಿಕ್ಕವರಿದ್ದಾಗ ಡಾ. ರಾಜಕುಮಾರ್ ಅವರ ಯೋಗವನ್ನು ನೋಡುತ್ತಿದ್ದೆ. ಯೋಗ ಮಾಡುವುದರಿಂದ ದೇಹಕ್ಕೆ ತೇಜಸ್ಸನ್ನು ನೀಡುತ್ತದೆ. ಯೋಗ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ದಿನವಿಡೀ ಉಲ್ಲಾಸದಿಂದ ಇರಲು ಸಹಕಾರಿಯಾಗುತ್ತದೆ. ದೇಶ ಕಾಯುವ ಸೈನಿಕರಿಗೂ ಯೋಗ ಮಾಡಿಸಬೇಕು ಎಂದು ಮನವಿ ಮಾಡಿದರು.

WhatsApp Image 2023 06 21 at 10.23.32 AM 1 1

ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಮಾತನಾಡಿ ಯೋಗ ವಿಶ್ವದಲ್ಲಿ ಪ್ರಸಿದ್ದಿ ಪಡೆದಿದೆ. ಯೋಗದ ಮಹತ್ವ ವಿಶ್ವಕ್ಕೆ ತಿಳಿದಿದೆ. ಮೈಸೂರು ಯೋಗಕ್ಕೆ ಪ್ರಸಿದ್ದಿ ಪಡೆದಿದೆ. ಯೋಗದಲ್ಲಿ ಮೈಸೂರು ಗಿನ್ನಿಸ್ ದಾಖಲೆ ಮಾಡಿತ್ತು. ಯೋಗ ಆರೋಗ್ಯಕ್ಕೆ ಉತ್ತಮ ಪ್ರಯೋಜನ ನೀಡುತ್ತದೆ. ಎಲ್ಲಾ ಯೋಗ ಸಂಘ ಸಂಸ್ಥೆಗಳು ಯೋಗ ಬೆಳೆಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಮತ್ತೊಮ್ಮೆ ಯೋಗದಲ್ಲಿ ಮೈಸೂರು ಗಿನ್ನಿಸ್ ದಾಖಲೆ ಮಾಡಬೇಕು ಎಂದರು.

ಶ್ರೀ ಸೋಮೇಶ್ವರ ಸ್ವಾಮೀಜಿ ಅವರು ಮಾತನಾಡಿ ಯೋಗ ಮನಸ್ಸನ್ನು ಹಿಡಿತದಲ್ಲಿ ಇಡುತ್ತಡೆ. ವಿಶ್ವದ 186 ದೇಶಗಳಲ್ಲಿ ಯೋಗ ಸ್ಥಾನ ಪಡೆದಿದೆ. ಸನಾತನ ಋಷಿಗಳು ಯೋಗವನ್ನು ನೀಡಿದರು ಎಂದು ಮಾಹಿತಿ ನೀಡಿದರು.

WhatsApp Image 2023 06 21 at 10.23.32 AM 1

ಶಂಕ ನಾದವನ್ನು ಮೊಳಗಿಸುವ ಮೂಲಕ ಯೋಗವನ್ನು ಪ್ರಾರಂಭಿಸಲಾಯಿತು. ವಿವಿಧ ಯೋಗ ಸಂಸ್ಥೆಗಳ ಯೋಗ ಪಟುಗಳು ಭಾಗವಹಿಸಿ ಯೋಗವನ್ನು ಮಾಡಿದರು.ಕೆಆರ್ ಎಸ್ ನಲ್ಲಿ ಯೋಗ ದಿನಾಚರಣೆ – ಅದ್ದೂರಿ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮುಖಂಡರಾದ ತನ್ವೀರ್ ಪಾಷಾ ಸೇರಿದಂತೆ ವಿವಿಧ ಧರ್ಮಗುರುಗಳು ಹಾಗೂ ಯೋಗಪಟುಗಳು ಭಾಗವಹಿಸಿದ್ದರು.

Copyright © All rights reserved Newsnap | Newsever by AF themes.
error: Content is protected !!