*ಕೆ ಪಿ ಮೌರ್ಯ ಹಾಗೂ ಬ್ರಿಜೇಶ್ ಪಾಠಕ್ ಡಿಸಿಎಂ ಆಗಿ ಅಧಿಕಾರ ಸ್ವೀಕಾರ
*52 ಮಂದಿ ಸಚಿವರಾಗಿ ಅಧಿಕಾರ ಸ್ವೀಕಾರ
ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು.
ಆದಿತ್ಯನಾಥ್ ಅವರು ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಯೋಗಿ ಆದಿತ್ಯನಾಥ್ ಜೊತೆ ಇಬ್ಬರು ಉಪಮುಖ್ಯ ಮಂತ್ರಿಗಳು ಹಾಗೂ 52 ಶಾಸಕರೂ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಲಖನೌನ ಏಕನಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥರಿಗೆ ರಾಜ್ಯಪಾಲ ಆನಂದಿ ಬೇನ್ ಪಟೇಲ್ ಅವರು ಪ್ರತಿಜ್ಞಾವಿಧಿ ಭೋದಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ, ಬಾಲಿವುಡ್ ನಟ ಅಕ್ಷಯ್ ಕುಮಾರ್, ಬಾಲಿವುಡ್ ನಟಿ ಕಂಗನಾ ರಾಣಾವತ್, ದಿ ಕಾಶ್ಮೀರ್ ಫೈಲ್ಸ್ ಚಿತ್ರದ ನಟ ಅನುಪಮ್ ಖೇರ್, ದಿ ಕಾಶ್ಮೀರ್ ಫೈಲ್ಸ್ ಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
- ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
- ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
- ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ