May 29, 2022

Newsnap Kannada

The World at your finger tips!

yogi pada

ಎರಡನೇ ಅವಧಿಗೂ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪದಗ್ರಹಣ

Spread the love

*ಕೆ ಪಿ ಮೌರ್ಯ ಹಾಗೂ ಬ್ರಿಜೇಶ್ ಪಾಠಕ್ ಡಿಸಿಎಂ ಆಗಿ ಅಧಿಕಾರ ಸ್ವೀಕಾರ

*52 ಮಂದಿ ಸಚಿವರಾಗಿ ಅಧಿಕಾರ ಸ್ವೀಕಾರ

ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು.

ಆದಿತ್ಯನಾಥ್ ಅವರು ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಯೋಗಿ ಆದಿತ್ಯನಾಥ್ ಜೊತೆ ಇಬ್ಬರು ಉಪಮುಖ್ಯ ಮಂತ್ರಿಗಳು ಹಾಗೂ 52 ಶಾಸಕರೂ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಲಖನೌನ ಏಕನಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥರಿಗೆ ರಾಜ್ಯಪಾಲ ಆನಂದಿ ಬೇನ್ ಪಟೇಲ್ ಅವರು ಪ್ರತಿಜ್ಞಾವಿಧಿ ಭೋದಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ, ಬಾಲಿವುಡ್ ನಟ ಅಕ್ಷಯ್ ಕುಮಾರ್, ಬಾಲಿವುಡ್ ನಟಿ ಕಂಗನಾ ರಾಣಾವತ್, ದಿ ಕಾಶ್ಮೀರ್ ಫೈಲ್ಸ್ ಚಿತ್ರದ ನಟ ಅನುಪಮ್ ಖೇರ್, ದಿ ಕಾಶ್ಮೀರ್ ಫೈಲ್ಸ್ ಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

error: Content is protected !!