ಗೋರಖ್‌ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ : ಯುಪಿ ಚುನಾವಣೆಗೆ ಸಿದ್ದತೆ

Team Newsnap
1 Min Read

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಹಾಗೂ ಎರಡನೇ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್‌ಪುರ (ನಗರ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಅಥವಾ ಮಥುರಾದಿಂದ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳು ಬಂದಿದ್ದವು.

ಆದರೆ ಮೊದಲ ಹಂತದ 57 ಹಾಗೂ ಎರಡನೇ ಹಂತದ 38 ಸೀಟುಗಳಲ್ಲಿ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬಿಡುಗಡೆ ಮಾಡಿದ್ದಾರೆ.

ಯೋಗಿ ಆದಿತ್ಯನಾಥ್ ಗೋರಖ್‌ಪುರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
2017ರವರೆಗೆ ಸತತ ಐದು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಪ್ರಬಲ ಕ್ಷೇತ್ರದಿಂದಲೇ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಪಕ್ಷ ಹೇಳುವ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಯೋಗಿ ಅವರು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಬಿಜೆಪಿ ಯೋಗಿ ಆದಿತ್ಯನಾಥ್ ಅವರನ್ನು ಗೋರಖ್‌ಪುರಕ್ಕೆ ಕಳುಹಿಸಿರುವುದು ನನಗೆ ಇಷ್ಟವಾಗಿದೆ. ಯೋಗಿ ಅಲ್ಲೇ ಉಳಿಯಬೇಕು, ಅಲ್ಲಿಂದ ಬರುವ ಅಗತ್ಯವಿಲ್ಲ ಎಂದು ತಿವಿದಿದ್ದಾರೆ.

Share This Article
Leave a comment