ಯುವ ದೇಹದಾರ್ಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

Team Newsnap
1 Min Read
Young bodybuilder found dead hanging ಯುವ ದೇಹದಾರ್ಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರಿನಲ್ಲಿ ಯುವ ದೇಹದಾರ್ಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕೆ ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ

ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು.

ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ.

ಇದೀಗ ಶ್ರೀನಾಥ್ ಪೋಷಕರು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಈ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Share This Article
Leave a comment