ಮಂಡ್ಯಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‍ಎಸ್ ಡ್ಯಾಂ ಮೇಲೆ ಫೆ 9 ರಂದು 4 ಗಂಟೆ ವೇಳೆ ಯುವಕನೊಬ್ಬನಿಗೆ ಸರ್ಕಾರಿ ವಾಹನವನ್ನು ಕೊಟ್ಟಿದ್ದ ಪೋಲಿಸ್ ಪೇದೆಯನ್ನು ಅಮಾನತ್ತು ಮಾಡಲಾಗಿದೆ.
ಅಣೆಕಟ್ಟಿನ ಮೇಲೆ ಪೊಲೀಸ್ ಜೀಪ್ ಚಲಾಯಿಸಿದ್ದಲ್ಲದೇ ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ್ದ ಆರೋಪದ ಮೇಲೆ ಎಸ್ ಬಿ ಸ್ವಾಮಿ ಯನ್ನು ಸಸ್ಪೆಂಡ್ ಮಾಡಲಾಗಿದೆ. ಸ್ವಾಮಿ ಕರ್ನಾಟಕ ಕೈಗಾರಿಕಾ ಭದ್ರತೆಯ 3ನೇ ಪಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.
ಆ ದಿನ ಯುವಕ ಸರ್ಕಾರಿ ಜೀಪ್ ಚಲಾಯಿಸುತ್ತಿದ್ದರೆ ಪೊಲೀಸ್ ಅಧಿಕಾರಿ ಮಾತ್ರ ಪಕ್ಕದಲ್ಲಿ ಕೂತು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ್ದರು.
ಈ ಕುರಿತು ಫೆಬ್ರವರಿ 27 ರಂದು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಯಿಂದಲೇ ನಿಯಮ ಉಲ್ಲಂಘನೆ ಮಾಡಿದ ಸುದ್ದಿಯೂ ಬಂದಿತ್ತು.
ಪೊಲೀಸ್ ಇಲಾಖೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಸಸ್ಪೆಂಡ್ ಆದೇಶ ಹೊರಡಿಸಿದ್ದಾರೆ. ಭದ್ರತೆಯ ದೃಷ್ಟಿಯಿಂದ ಡ್ಯಾಂ ಮೇಲೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿದರೂ ಯುವಕನಿಗೆ ದರ್ಬಾರ್ ಮಾಡಲು ಅವಕಾಶ ನೀಡಲಾಗಿರುವುದರಿಂದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ