ಬೆಂಗಳೂರು:ರಾಜ್ ಕುಮಾರ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಶೋರೂಮ್ ಸಂಪೂರ್ಣ ಹೊತ್ತಿ ಉರಿದಿದೆ. ದುರಂತದಲ್ಲಿ ಪ್ರಿಯಾ ಎಂಬ ಯುವತಿ ಸಾವಿಗೀಡಾಗಿದ್ದಾರೆ.
ಅವಘಡದ ವಿವರಗಳು:
ಪ್ರಿಯಾ ಶೋರೂಮ್‌ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದರು. ಬೆಂಕಿ ಆಕಸ್ಮಿಕವಾಗಿ ಶೋರೂಮ್‌ನಲ್ಲಿ ಕಾಣಿಸಿಕೊಂಡಿದ್ದು, ಪ್ರಿಯಾ ಆ ಅವಾಂತರದಿಂದ ಹೊರಬರಲು ಸಾಧ್ಯವಾಗದೆ ಒಳಗೆ ಸಿಲುಕಿಕೊಂಡು ಸಜೀವ ದಹನವಾಗಿದ್ದಾರೆ.
ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ತಕ್ಷಣ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಮಾಡಿದ್ದು , ಅವಘಡದಿಂದಾಗಿ ಶೋರೂಮ್ ಸಂಪೂರ್ಣವಾಗಿ ಭಸ್ಮವಾಗಿದೆ.ಇದನ್ನು ಓದಿ –100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
ಈ ಘಟನೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಉಂಟುಮಾಡಿದ್ದು, ಶಾರ್ಟ್ ಸರ್ಕ್ಯೂಟ್‌ಗಳಿಂದ ಸಂಭವನೀಯ ಅಪಾಯಗಳ ಕುರಿತು ಎಚ್ಚರಿಕೆಯ ಅಗತ್ಯವಿದೆ.
More Stories
ಬಿಜೆಪಿ ಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆ: ಹೈಕೋರ್ಟ್ ತಕ್ಷಣ ಬಿಡುಗಡೆಗೆ ಆದೇಶ
ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್ಗಳ ಕಳ್ಳತನ
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ