ತುಮಕೂರು: ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ, ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಮೃತಪಟ್ಟ ದುರಂತ ಘಟನೆ ನಡೆದಿದೆ.
ಮೃತ ಯುವತಿಯನ್ನು ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ನಿವಾಸಿ ಸೋಮನಾಥ್ ಅವರ ಪುತ್ರಿ ಹಂಸ (19) ಎಂದು ಗುರುತಿಸಲಾಗಿದೆ. ಭಾನುವಾರ ರಜೆಯ ಹಿನ್ನೆಲೆಯಲ್ಲಿ ಹಂಸ ಮಂದಾರಗಿರಿ ಬೆಟ್ಟಕ್ಕೆ ಭೇಟಿ ನೀಡಿದ್ದಳು. ಸಮೀಪದಲ್ಲಿರುವ ಮೈದಾಳ ಕೆರೆಯನ್ನು ನೋಡಲು ಹೋದಾಗ, ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾಳೆ.
ಈ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.ಇದನ್ನು ಓದಿ –ಪೋಲೀಸರ ವೇಷದಲ್ಲಿ ಸೈಬರ್ ವಂಚನೆ: ನಿವೃತ್ತ ಉಪನ್ಯಾಸಕರಿಂದ ₹65 ಲಕ್ಷ ದೋಚಿದ ಕಳ್ಳರು
ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಮೃತದೇಹವನ್ನು ಕೆರೆಯಿಂದ ಹೊರತೆಗೆದು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು