ಮೈಸೂರಿನಲ್ಲಿ ಚಿರತೆ ದಾಳಿಗೆ ಯುವತಿ ಬಲಿ – ಕಂಡಲ್ಲಿ ಗುಂಡಿಕ್ಕಲು ಅರಣ್ಯ ಇಲಾಖೆ ಸೂಚನೆ

Team Newsnap
1 Min Read
Young woman killed in leopard attack in Mysore - Forest department instructed to shoot if seen ಮೈಸೂರಿನಲ್ಲಿ ಚಿರತೆ ದಾಳಿಗೆ ಯುವತಿ ಬಲಿ – ಕಂಡಲ್ಲಿ ಗುಂಡಿಕ್ಕಲು ಅರಣ್ಯ ಇಲಾಖೆ ಸೂಚನೆ

ಕಾಲೇಜು ಯುವತಿಯೊಬ್ಬಳು ನಿನ್ನೆ ಸಂಜೆ ಚಿರತೆ ದಾಳಿಗೆ ಬಲಿಯಾಗಿದ್ದಾಳೆ. ಈ ಘಟನೆ ಮೈಸೂರು ಟಿ.ನರಸೀಪುರ ತಾಲೂಕಿನಲ್ಲಿ ಜರುಗಿದೆ.

ಚಿರತೆ ದಾಳಿಗೆ ಎರಡನೇ ಬಲಿಯಾದ ಬೆನ್ನಲ್ಲೇ ಚಿರತೆಗೆ ಕಂಡಲ್ಲಿ ಗುಂಡು ಹಾರಿಸಲು ಚಿರತೆ ಕಂಡು ಬಂದಲ್ಲಿ ಗುಂಡು ಹಾರಿಸಲು ಡಿಸಿಎಫ್ ಕಮಲ ಕರಿಕಾಲನ್ ಸೂಚನೆ ಹೊರಡಿಸಿದ್ದಾರೆ.ರಾಜ್ಯದಲ್ಲಿ 71 ಮಂದಿ ತಹಶೀಲ್ದಾರ್ ಗಳ ವರ್ಗಾವಣೆಗೆ ಆದೇಶ – ಪಟ್ಟಿ ಇಲ್ಲಿದೆ

ಚಿರತೆ ದಾಳಿಯಿಂದ ಮೃತಪಟ್ಟ ಯುವತಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಕುಟುಂಬಕ್ಕೆ 5 ವರ್ಷಗಳ ಕಾಲ 2 ಸಾವಿರ ರೂ. ಮಾಸಾಶನ. ಕುಟುಂಬದ ಒಬ್ಬ ಸದಸ್ಯರಿಗೆ ಹೊರ ಗುತ್ತಿಗೆ ಆಧಾರದಡಿ ಕೆಲಸ ನೀಡಲು ಅರಣ್ಯ ಇಲಾಖೆ ಮುಂದಾಗಿದೆ.

ಟಿ. ನರಸೀಪುರ ಎಫ್‍ಆರ್‌ಓಗೆ ಕಡ್ಡಾಯ ರಜೆ ನೀಡಿ ಈ ಬಗ್ಗೆ ತನಿಖೆ ನಡೆಸಲು ಆದೇಶ ಹೊರಡಿಸಲಾಗಿದೆ, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಮೈಸೂರಿನಲ್ಲಿ ಕಳೆದ ಕೆಲ ತಿಂಗಳಿಂದ ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆ ಇದೀಗ ಎರಡನೇ ಬಲಿ ಪಡೆದಿದೆ.

ನಿನ್ನೆ ಸಂಜೆ ಟಿ.ನರಸೀಪುರ ತಾಲೂಕಿನಲ್ಲಿ ಕಾಲೇಜು ಯುವತಿ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿತು. ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟಿದ್ದಾಳೆ. ಈ ಹಿಂದೆ ಕಳೆದ ತಿಂಗಳು ಯುವಕನೋರ್ವನನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿತ್ತು. ಹಾಗಾಗಿ ಸಾರ್ವಜನಿಕರಿಂದ ತೀವ್ರ ಆಕ್ಷೇಪ ಕೇಳಿ ಬಂದ ಹಿನ್ನೆಲೆ ಅರಣ್ಯ ಇಲಾಖೆ ಚಿರತೆಗೆ ಕಂಡಲ್ಲಿ ಗುಂಡು ಹಾರಿಸಲು ಸೂಚಿಸಿದೆ.

Share This Article
Leave a comment