ಮಂಡ್ಯ:ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಿದ ಮೂರು ದಿನಗಳಲ್ಲೇ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.
ಕೆ.ಆರ್.ಪೇಟೆ ಪುರಸಭೆ ಸದಸ್ಯ ಕೆ.ಸಿ. ಮಂಜುನಾಥ್ ಪುತ್ರ ಶಶಾಂಕ್ (28) ಅಕಾಲಿಕ ಸಾವಿಗೀಡಾದ ದುರ್ದೈವಿ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಐಟಿ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಶಾಂಕ್, ಜಾರ್ಖಂಡ್ ಮೂಲದ ಅಷ್ಣಾರ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದರು. ಈ ಸಂಬಂಧ ಮನೆಯವರ ಒಪ್ಪಿಗೆ ಪಡೆದ ನಂತರ, ಮಾರ್ಚ್ 2ರಂದು ಮೈಸೂರಿನ ಒಂದು ರೆಸಾರ್ಟ್‌ನಲ್ಲಿ ಶಾಸ್ತ್ರೋಕ್ತವಾಗಿ ವಿವಾಹವಾದರು.ಇದನ್ನು ಓದಿ –ಚಾಂಪಿಯನ್ಸ್ ಟ್ರೋಫಿ: ಕಾಂಗರೂಗಳನ್ನು ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ
ಮದುವೆ ದಿನವೇ ಸ್ವಲ್ಪ ಜ್ವರವಿದೆ ಎಂದು ಶಶಾಂಕ್ ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದರು. ಮಂಗಳವಾರ, ಬೆಂಗಳೂರಿನ ನಿವಾಸದಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಆತನ್ನು ತಕ್ಷಣವೇ ಪೋಷಕರು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಆದರೆ, ದುರದೃಷ್ಟವಶಾತ್, ಆಸ್ಪತ್ರೆಗೆ ತಲುಪುವ ಮುನ್ನವೇ ಶಶಾಂಕ್ ಕೊನೆಯುಸಿರೆಳೆದಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು