ಈ ಘಟನೆ ಪಟ್ಟಣದ ಆರ್‌ಎಂಸಿ ಬಡಾವಣೆಯಲ್ಲಿ ಜರುಗಿದೆ. ಕಲಿರಾಜ್ (18) ಅಪಘಾತದಲ್ಲಿ ಮೃತಪಟ್ಟ ಯುವಕ.
ಭಾನುವಾರ ರಾತ್ರಿ ಸಮೀಪದ ಮಾಗಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ಹೊಸ ವರ್ಷ ಆಚರಣೆಯ ಪಾರ್ಟಿ ಮುಗಿಸಿಕೊಂಡು ಬೈಕ್ ನಲ್ಲಿ ಪಿರಿಯಾಪಟ್ಟಣಕ್ಕೆ ಬರುತ್ತಿದ್ದಾಗ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಲಿರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಆತನೊಂದಿಗಿದ್ದ ಪೃಥ್ವಿರಾಜ್ ಮತ್ತು ಕಿರಣ್ ಎಂಬುವರು ಸಹ ಗಾಯಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಣೆ
ಮೃತ ಯುವಕನ ಪೋಷಕರು ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣದ ಬಗ್ಗೆ ತನಿಖೆ ನಡೆಸಿ ವಾಹನಪತ್ತೆಗೆ ಮುಂದಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು