ಘಟನೆಯ ವಿವರ:
ಆರೋಪಿ ಅಫ್ಫಾನ್(23) ತನ್ನ ಸಹೋದರ ಅಹ್ಸಾನ್, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿದಾ ಮತ್ತು ಗೆಳತಿ ಫರ್ಶಾನಾ ಅವರನ್ನು ಚಾಕು ಹಾಗೂ ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ. ಹತ್ಯೆ ನಡೆಸಿದ ಬಳಿಕ ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ನಂತರ ತಾನೂ ವಿಷ ಸೇವಿಸಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ, ತನ್ನ ಕೃತ್ಯದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರು ಕೂಡಲೇ ಅಫ್ಫಾನ್‌ಗೆ ವೈದ್ಯಕೀಯ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದು, ಆತನ ಹೇಳಿಕೆಯ ಮೇರೆಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಐವರ ಸಾವನ್ನು ಖಚಿತಪಡಿಸಿಕೊಳ್ಳಲಾಗಿದೆ. ತಾಯಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವ್ಯಾಪಾರದ ನಷ್ಟವೇ ಕಾರಣ?
ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಅಫ್ಫಾನ್, ತಾನು ಗಲ್ಫ್ ದೇಶದಲ್ಲಿ ವ್ಯಾಪಾರ ನಡೆಸುತ್ತಿದ್ದೆ ಮತ್ತು ಅದರಲ್ಲಿ ಭಾರೀ ನಷ್ಟ ಅನುಭವಿಸಿದ್ದಾಗಿ ತಿಳಿಸಿದ್ದಾನೆ. ಸಾಲ ತೀರಿಸಲು ಕುಟುಂಬದವರ ಬಳಿ ಹಣ ಕೇಳಿದಾಗ ಸಹಾಯ ನಿರಾಕರಿಸಿದ್ದರಿಂದ ಕೋಪಗೊಂಡು ಈ ಕೃತ್ಯ ಎಸಗಿದ್ದೇನೆ ಎಂದು ಆತ ಹೇಳಿದ್ದಾನೆ.
ಮೂರೂ ಪ್ರತ್ಯೇಕ ಸ್ಥಳಗಳಲ್ಲಿ ಹತ್ಯೆ:
ಮೊದಲಿಗೆ ಅಜ್ಜಿ ಮನೆಗೆ ತೆರಳಿದ ಅಫ್ಫಾನ್, ಆಕೆಯ ಒಡವೆ ಕೇಳಿದಾಗ ನಕಾರ ಬಂದ ಕಾರಣ ಆಕೆಯನ್ನು ಕೊಂದಿದ್ದಾನೆ. ಬಳಿಕ ಚಿಕ್ಕಪ್ಪನ ಮನೆಗೆ ತೆರಳಿ ಹಣ ಕೇಳಿದಾಗ ಸಹಾಯ ನಿರಾಕರಿಸಿದ ಹಿನ್ನಲೆಯಲ್ಲಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಹತ್ಯೆಗೈದಿದ್ದಾನೆ. ನಂತರ ತಮ್ಮನನ್ನು ಕೊಂದು ತಾಯಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಕೊನೆಗೆ ತನ್ನ ಗೆಳತಿಯನ್ನು ಮನೆಗೆ ಕರೆಸಿ ಆಕೆಯನ್ನೂ ಹತ್ಯೆಗೈದಿದ್ದಾನೆ.ಇದನ್ನು ಓದಿ –ರಾಜ್ಯದಲ್ಲಿ 19 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ
ಈ ಘಟನೆ ಕೇರಳದಲ್ಲಿ ದೊಡ್ಡ ಸದ್ದು ಮಾಡಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಲು ಮುಂದಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು