ಜೆಡಿಎಸ್ ಪಕ್ಷದ ಹಿರಿಯ ನಾಯಕ, ಮಾಜಿ ಶಾಸಕ ವೈಎಸ್ವಿ ದತ್ತ ಅವರು ಇಂದು ಬೆಳಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ನಿವಾಸಕ್ಕೆ ಬೆಂಬಲಿಗರೊಂದಿಗೆ ಭೇಟಿ ಕೊಟ್ಟಿದ್ದಾರೆ.
ಕಡೂರು ಕ್ಷೇತ್ರದ ನೂರಾರು ಬೆಂಬಲಿಗರೊಂದಿಗೆ ಆಗಮಿಸಿ ದತ್ತ ಅವರು, ಅಧಿವೇಶನದಲ್ಲಿ ರಾಗಿ ಬೆಳೆದ ರೈತರ ಸಮಸ್ಯೆಗಳು ಹಾಗೂ ರಾಗಿ ಖರೀದಿ ಬಗ್ಗೆ ಮಾತನಾಡಿ ಒತ್ತಾಯಿಸಲು ಮನವಿ ಮಾಡಿದರು.
ವೈ.ಎಸ್.ವಿ ದತ್ತ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಿ ಎಂದು ಬಹಿರಂಗವಾಗಿಯೇ ದತ್ತ ಬೆಂಬಲಿಗರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಅಭಿಮಾನಿಗಳು ಮನವಿ ಮಾಡುತ್ತಿದಂತೆ ‘ಸುಮ್ಮನಿರಿ’ ಎಂದು ವೈ.ಎಸ್.ವಿ. ದತ್ತ ಅವರು ಅಭಿಮಾನಿಗಳ ಮಾತನ್ನು ತಡೆಯುವ ಪ್ರಯತ್ನ ಮಾಡಿದರು.
ಆದರೂ ಬಿಡದ ದತ್ತ ಅಭಿಮಾನಿಗಳು ‘ಸಿದ್ದರಾಮಯ್ಯನವರೇ ಕೃಷ್ಣಮೂರ್ತಿ ಅವರ ಕಾಲದಿಂದಲೂ ನೀವು ಹೇಳಿದಂತೇ ಮಾಡಿದ್ದೀವಿ, ಇದೊಂದು ಬಾರಿ ದತ್ತ ಅವರಿಗೆ ಅವಕಾಶ ಮಾಡಿಕೊಡಿ’ ಎಂದು ಮನವಿ ಮಾಡಿದರು.
ಆದರೆ ಅಭಿಮಾನಿಗಳ ಬೇಡಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು ಹೂಂ ಎಂದು ಸುಮ್ಮನಾದರು
ನಂತರ ಮಾತನಾಡಿದ ದತ್ತ ಅವರು, ನನ್ನ ಬೆಂಬಲಿಗರು, ಅಭಿಮಾನಿಗಳು ಅವರ ಅಭಿಪ್ರಾಯ, ಭಾವನೆಯನ್ನು ಸಿದ್ಧರಾಮಯ್ಯ ಬಳಿ ಹೇಳಿದ್ದಾರೆ. ಅವರ ಅಭಿಪ್ರಾಯ ತಪ್ಪು ಅಂತಲೂ ಹೇಳಲ್ಲ, ಸರಿ ಅಂತಲೂ ಹೇಳಲ್ಲ. ಈಗಲೇ ನಾನು ಆ ಬಗ್ಗೆ ಏನೂ ಹೇಳಲ್ಲ. ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಸದ್ಯಕ್ಕೆ ನನ್ನದು ಮೌನವೇ ಉತ್ತರ ಎಂದು ಹೇಳಿದರು.
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
More Stories
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ