ಜನವರಿಯಲ್ಲಿ ಯುವ ನಿಧಿ – ಇಲ್ಲಿದೆ ಸಂಪೂರ್ಣ ಮಾಹಿತಿ

Team Newsnap
1 Min Read

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್‌ ಆಗಿದ್ದು, ಡಿಪ್ಲೋಮಾ, ಪದವೀಧರರಿಗೆ ಜನವರಿಯಲ್ಲಿ ‘ಯುವನಿಧಿ’ ಜಾರಿಗೊಳಿಸುವುದಾಗಿ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83ಕ್ಕೆ ಆದೇಶ ಹೊರಡಿಸಿ , ಜಾರಿಗೊಳಿಸಲಾಗುತ್ತಿದೆ ಮತ್ತು 4 ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿವೆ, ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ.

ಇದೀಗ 2024 ರ ಜನವರಿಯಲ್ಲಿ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆಗಲನ್ನು ನಡೆಸಲಾಗಿದೆ.ರೈಲ್ವೆ ಇಲಾಖೆಯಿಂದ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಪರೀಕ್ಷೆ, ಸಂದರ್ಶನವಿಲ್ಲದೇ ಆಯ್ಕೆ

ನಿರುದ್ಯೋಗ ಯುವ ನಿಧಿ ಭತ್ಯೆ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು ಹೀಗಿದೆ :

  • ಆಧಾರ್ ಕಾರ್ಡ್
  • ಇ-ಮೇಲ್ ಐಡಿ
  • ಭಾವಚಿತ್ರ
  • ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ
  • ಬ್ಯಾಂಕ ಖಾತೆಯ ವಿವರ
  • ಮೊಬೈಲ್ ಸಂಖ್ಯೆ
  • ಆದಾಯ ಪ್ರಮಾಣ ಪತ್ರ
  • ಪದವಿ ಹಾಗೂ ಡಿಪ್ಲಮೋ ಮುಗಿಸಿದವರ ಕೊನೆಯ ವರ್ಷದ ಅಂಕಪಟ್ಟಿ.

Share This Article
Leave a comment