ಮುಂದಿನ ಸಿಎಂ ವಿಚಾರವಾಗಿ ನಮ್ಮ ಪಕ್ಷದ ಜಮೀರ್ ಅಹಮದ್ ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಆದರೆ ಪಕ್ಷ ಕಟ್ಟುವ ಸಾಮರ್ಥ್ಯ, ಜವಾಬ್ದಾರಿ ಇರುವ ನಾಯಕ ಹಾಗೂ ಯಾರಿಗೆ ನಾಲಿಗೆ ಮೇಲೆ ಹಿಡಿತ ಇರುತ್ತದೆಯೋ ಅವರು ಈ ರೀತಿ ಮಾತನಾಡೋದಿಲ್ಲ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಶಾಸಕರಾದವರು ಈ ರೀತಿ ಮಾತನಾಡಬಾರದು. ಈ ಮಾತು ಮುಂದಿನ ಬಾರಿ ಅಧಿಕಾರ ಹಿಡಿಯುವ ಪಕ್ಷದ ಗುರಿಗೆ ಹಿನ್ನಡೆಯಾಗುತ್ತದೆ. ಮಾತನಾಡುವವರು ಇದನ್ನು ಅರಿತುಕೊಂಡು ಮಾತನಾಡಬೇಕು ಎಂದು ಹೇಳಿದರು.
ಅನಗತ್ಯ ಹಾಗೂ ಬಹಿರಂಗವಾಗಿ ಈ ವಿಚಾರ ಚರ್ಚೆ ಮಾಡದಂತೆ ಈಗಾಗಲೇ ನಮ್ಮ ಪಕ್ಷದಲ್ಲಿ ಸೂಚನೆ ನೀಡಲಾಗಿದೆ. ಆದರೂ ಕೂಡ ಈ ವಿಚಾರವಾಗಿ ಮಾತನಾಡಿದವರ ವಿರುದ್ಧ ಶಿಸ್ತು ಸಮಿತಿ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದರು.
ಮುಂದಿನ ಸಿಎಂ ವಿಚಾರವಾಗಿ ನಮ್ಮ ಪಕ್ಷದಲ್ಲಿ ವಿಭಿನ್ನ ಅಭಿಪ್ರಾಯ ಕೇಳಿಬರುತ್ತಿದೆ. ನಮ್ಮಲ್ಲಿ ಸಿಎಂ ಅರ್ಹತೆ ಇರುವವರು ಬಹಳ ಜನ ಇರುವುದರಿಂದ ಈ ಮಾತು ಕೇಳಿ ಬರುತ್ತಿದೆ. ಆದರೆ ಬಿಜೆಪಿಯವರಿಗೆ ಯಡಿಯೂರಪ್ಪ ಬಿಟ್ಟರೆ ಗತಿ ಇಲ್ಲ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ