ರೈತರಿಗೆ ಅಫೆಕ್ಸ್ – ಡಿಸಿಸಿ ಬ್ಯಾಂಕ್ ನಿಂದ ಶೂನ್ಯ ಬಡ್ಡಿಯಲ್ಲಿ ಸಾಲ – ಸಚಿವ ಸೋಮ ಶೇಖರ್

Team Newsnap
1 Min Read
Dasara 2022- This time gold pass canceled: Minister Somashekhar ನಾಡಹಬ್ಬ ದಸರಾ - 2022 ಈ ಬಾರಿ ಗೋಲ್ಡ್‌ ಪಾಸ್‌ ರದ್ದು: ಸಚಿವ ಸೋಮಶೇಖರ್‌ ಸ್ಪಷ್ಟನೆ

ರಾಜ್ಯ ಸರ್ಕಾರ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಗಳ ಮೂಲಕ 24 ಸಾವಿರ ಕೋಟಿ ರು. 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದ ಆವರಣದಲ್ಲಿ ಶನಿವಾರ ಮರ್ಚೆಂಟ್ಸ್‌ ಕೋ-ಆಪರೇಟಿವ್‌ ಬ್ಯಾಂಕ್‌ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಗಳ ಮೂಲಕ 24 ಸಾವಿರ ಕೋಟಿ ರೂ. ಗಳನ್ನು 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ, ಈಗಾಗಲೇ 7 ಸಾವಿರ ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದೆ ಎಂದರು. ಇದನ್ನು ಓದಿ – ಉದ್ಯಮಿ, ಹೂಡಿಕೆದಾರ ರಾಕೇಶ್ ಝಂಝನವಾಲ ಹೃದಯಾಘಾತದಿಂದ ನಿಧನ

ರಾಜ್ಯ 33 ಲಕ್ಷ ರೈತರಿಗೆ ಸಾಲ ಸವಲತ್ತುಗಳನ್ನು ನೀಡಲು ಮತ್ತು ನಿರ್ವಹಣೆ ಮಾಡಲು ಒಂದೇ ತಂತ್ರಾಂಶವನ್ನು ಕೇಂದ್ರ ಸರಕಾರದ ಸೂಚನೆಯಂತೆ ಅಳವಡಿಸಲಾಗುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರ 360 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ – ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾಲ್ನಡಿಗೆಯ ಟಿಪ್ಪು ಫ್ಲೆಕ್ಸ್ ಧ್ವಂಸ- ಪುನೀತ್ ಕೆರೆಹಳ್ಳಿ, ಬೆಂಬಲಿಗರ ಕೃತ್ಯ

Share This Article
Leave a comment