ಶೀಘ್ರ ಜಿಪಂ, ತಾಪಂ ಚುನಾವಣೆ : ಮತಪಟ್ಟಿ, ಮತಕೇಂದ್ರ ತಯಾರಿಗೆ ಆಯೋಗ ಸಿದ್ದತೆ

Team Newsnap
1 Min Read

ಬೆಂಗಳೂರು : ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಗೆ ಸಿದ್ಧತೆ ಆರಂಭವಾಗಿದೆ.

ಮತದಾರರ ಪಟ್ಟಿ ಸಿದ್ಧತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬಂಧ ಕಾರ್ಯಪ್ರವೃತ್ತರಾಗವಂತೆ ರಾಜ್ಯ ಚುನಾವಣಾ ಆಯೋಗದಿಂದ ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದೆ.

ಶುಕ್ರವಾರ ಈ ಸಂಬಂಧ ಚುನಾವಣೆ ಆಯೋಗದಿಂದ ಸುತ್ತೋಲೆ ಹೊರಡಿಸಿದೆ.ಇದನ್ನು ಓದಿ –ಇಂದು 11.45 ಕ್ಕೆ ಶಾಸಕರ ಪ್ರಮಾಣ ವಚನ : ಸಚಿವ ಸ್ಥಾನ ಯಾವ ಜಿಲ್ಲೆಗೆ ಎಷ್ಟು? 

  • ಮೇ 29 ರಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕ್ಷೇತ್ರದ ಮತದಾರರನ್ನು ಗುರುತಿಸುವ ಕಾರ್ಯ ಆರಂಭಿಸಲು ತಿಳಿಸಲಾಗಿದೆ.
  • ಜೂನ್ 4ರವರೆಗೆ ಈ ಕಾರ್ಯ ನಡೆಯಲಿದೆ.
  • ಜೂನ್ 5 ರಿಂದ 13 ರವರೆಗೆ ಮತದಾರರ ಪಟ್ಟಿ ಪರಿಶೀಲನೆ ಕಾರ್ಯ ನಡೆಯಲಿದೆ
  • ಜೂನ್ 14ರಿಂದ ಕರಡು ಮತದಾರರ ಪಟ್ಟಿ ಪ್ರಕಟ ಸಲಾಗುವುದು.
  • ಜೂನ್ 19ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ.
  • ಜೂನ್ 22 ರಂದು ಆಕ್ಷೇಪಣೆ ಸಲ್ಲಿಸಲು ಅಂತಿಮ ದಿನವಾಗಿದೆ.
  • ಮತ್ತೊಮ್ಮೆ ಪರಿಶೀಲನೆ ಕಾರ್ಯ ಜೂನ್ 25ರಂದು ನಡೆಸಲಾಗುವುದು.
  • ಜೂನ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ.
Share This Article
Leave a comment