ರಾಜ್ಯದ ಜಿಪಂ – ತಾಪಂ ಚುನಾವಣೆಯ ಅರ್ಜಿ ಮೇ 17 ರಂದು ವಿಚಾರಣೆ : ಹೈಕೋರ್ಟ್

Team Newsnap
1 Min Read
shock for Congress: High Court order to cancel ACB - Lokyukta gets power again

ರಾಜ್ಯದ ಜಿ.ಪಂ ಹಾಗೂ ತಾ.ಪಂ. ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ಅರ್ಜಿಯನ್ನು ಮೇ 17ರಂದು ವಿಚಾರಣೆ ನಡೆಸುವುದಾಗಿ ಹೈಕೋರ್ಟ್‌ ಪ್ರಕಟಿಸಿದೆ.

ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಮೆಮೋ ಪರಿಗಣಿಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ಪ್ರಸಾದ್‌ ಹಾಗೂ ನ್ಯಾ. ಎಂ.ಜಿ.ಎಸ್‌ ಕಮಾಲ್‌ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಈ ನಿರ್ಧಾರವನ್ನು ಪ್ರಕಟಿಸಿದರು.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ನ್ಯಾಯವಾದಿ ಕೆ.ಎನ್‌. ಫ‌ಣೀಂದ್ರ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಅದರಂತೆ, ರಾಜ್ಯದಲ್ಲೂ ಜಿ.ಪಂ. ತಾ.ಪಂ ಚುನಾವಣೆ ನಡೆಸಬೇಕಾಗಿದೆ. ಈಗಾಗಲೇ ಚುನಾವಣೆ ಸಾಕಷ್ಟು ವಿಳಂಬವಾಗಿದೆ. ಈ ಕುರಿತ ಚುನಾವಣಾ ಆಯೋಗದ ಅರ್ಜಿ ವಿಚಾರಣಾ ಹಂತದಲ್ಲಿದೆ. ಸುಪ್ರೀಂಕೋರ್ಟ್‌ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದ್ದು, ಅದಕ್ಕಾಗಿ ಮೆಮೋ ಸಲ್ಲಿಸಲಾಗಿದೆ ಎಂದರು

ಮೇ 17ರಂದು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿಬೇಕು ಎಂದು ಮಾಡಿದ ಮನವಿಯಂತೆ ನ್ಯಾಯಪೀಠ, ಅರ್ಜಿಯನ್ನು ಮೇ 17ರಂದು ವಿಚಾರಣೆ ನಡೆಸುವುದಾಗಿ ಹೇಳಿ, ವಿಚಾರಣೆಯನ್ನು ಮುಂದೂಡಿತು.

ಇದನ್ನು ಓದಿ :PSI ನೇಮಕಾತಿ ವಿಭಾಗದ DYSP ಶಾಂತ ಕುಮಾರ್ ಬಂಧನ

ಯಾವ ಅರ್ಜಿ ವಿಚಾರಣೆ ಆಗಬೇಕು ?

ರಾಜ್ಯದಲ್ಲೂ ಚುನಾವಣೆ ಸನ್ನಿಹಿತ ಕಳೆದ ವರ್ಷ ಏಪ್ರಿಲ್‌, ಮೇ ಮತ್ತು ಜೂನ್‌ ತಿಂಗಳಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿ.ಪಂ ಹಾಗೂ ತಾ.ಪಂಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಸಹ ಪ್ರಕಟಿಸಿತ್ತು. ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು. ಇನ್ನೇನು ದಿನಾಂಕ ಘೋಷಣೆ ಮಾಡಬೇಕೆನ್ನುವಷ್ಟರಲ್ಲಿ ಕ್ಷೇತ್ರ ಪುರನ್‌ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಅದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಆ ಅರ್ಜಿ ವಿಚಾರಣಾ ಹಂತದಲ್ಲಿದೆ.

Share This Article
Leave a comment