October 4, 2024

Newsnap Kannada

The World at your finger tips!

priyank karge 1

ಜಿಪಂ – ತಾಪಂಗೆ ಚುನಾವಣೆ : ಸಚಿವ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸಮಿತಿ

Spread the love

ಬೆಂಗಳೂರು :ರಾಜ್ಯದಲ್ಲಿ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎದುರಿಸಲು ರಾಜ್ಯ ಕಾಂಗ್ರೆಸ್, ಸಚಿವ ಪ್ರಿಯಾಂಕ ಖರ್ಗೆ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವತಯಾರಿ ಸಮಿತಿಯೊಂದನ್ನುಬ ರಚನೆ ಮಾಡಲಾಗಿದೆ.

ಸಮಿತಿಯ ಸದಸ್ಯರಾಗಿ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಸಚಿವರಾದ ಈಶ್ವರ್ ಖಂಡ್ರೆ, ಎಚ್.ಕೆ.ಪಾಟೀಲ್, ಎಚ್.ಸಿ.ಮಹದೇವಪ್ಪ, ಡಾ.ಶರಣಪ್ರಕಾಶ್ ಪಾಟೀಲ್, ಆರ್.ಬಿ. ತಿಮ್ಮಾಪುರ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ನೇಮಿಸಲಾಗಿದೆ.

ಶಾಸಕರಾದ ರೂಪಾ ಶಶಿಧರ್, ಎ.ಎಸ್.ಪೊನ್ನಣ್ಣ, ಕೆ.ಎಂ.ಶಿವಲಿಂಗೇಗೌಡ, ಎಸ್.ಆರ್.ಶ್ರೀನಿವಾಸ್, ವಿಧಾನಪರಿಷತ್‍ನ ಸದಸ್ಯ ಎಸ್.ರವಿ, ಮಾಜಿ ಸಂಸದ ನಾರಾಯಣಸ್ವಾಮಿ, ಮಾಜಿ ಶಾಸಕ ವಿಜಯ್ ಸಿಂಗ್ ಮತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್‍ನ ಅಧ್ಯಕ್ಷ ಮಂಜುನಾಥ ಗೌಡ ಸಮಿತಿಯ ಸದಸ್ಯರಾಗಿದ್ದು, ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ್ ಭಂಡಾರಿ ಸಮಿತಿಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ.ರಾಜ್ಯ ಸರ್ಕಾರ ದಿಂದ ನಾಲ್ವರು IAS ಅಧಿಕಾರಿಗಳ ವರ್ಗಾವಣೆ

ಎಲ್ಲಾ ಜಿಲ್ಲೆಗಳಲ್ಲಿ ಚುನಾವಣೆಯನ್ನು ನಡೆಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕೂಲಂಕುಶವಾಗಿ ವರದಿಯನ್ನು 15 ದಿನಗಳ ಒಳಗಾಗಿ ಕೆಪಿಸಿಸಿಗೆ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆಂದು ಗೊತ್ತಾಗಿದೆ.

Copyright © All rights reserved Newsnap | Newsever by AF themes.
error: Content is protected !!